ಬೆಚ್ಚ ಬೆಚ್ಚ ನ್ಯೂಸ್
ಉಡುಪಿ ಡಿಸ್ಟ್ರಿಕ್ಟ್ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಉಡುಪಿ – ವಾರ್ಷಿಕ ಮಹಾಸಭೆ!
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
Next
Prev

ಕಂಬಳದಲ್ಲೂ ಹುತಾತ್ಮ ಯೋಧ ಪ್ರಾಂಜಲ್ಗೆ ಗೌರವ; 2 ದಿನಗಳ ಹಬ್ಬಕ್ಕೆ ಚಾಲನೆ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್

ಬೆಂಗಳೂರು: ಅದ್ಧೂರಿಯಾದ ಸಮಾರಂಭದಲ್ಲಿ ನಮ್ಮ ಕಂಬಳ, ಬೆಂಗಳೂರು ಕಂಬಳ ಸ್ಪರ್ಧೆಯನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಉದ್ಘಾಟನೆ ಮಾಡಿದರು. ಇದರಿಂದ ಇದೇ ಮೊದಲ ಬಾರಿಗೆ ಸಿಲಿಕಾನ್ ಸಿಟಿಯಲ್ಲಿ ಕಂಬಳ ಸ್ಪರ್ಧೆಯನ್ನು ನಡೆಸಲಾಗುತ್ತಿದೆ. ಇಂದು ಮತ್ತು ನಾಳೆ ಈ ಸ್ಪರ್ಧೆ ನಡೆಯಲಿದ್ದು ಒಟ್ಟು 178 ಜೋಡಿ ಕೋಣಗಳು ಇದರಲ್ಲಿ ಭಾಗವಹಿಸಿವೆ.



ಬೆಂಗಳೂರು ಕಂಬಳ ಸ್ಪರ್ಧೆಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಚಾಲನೆ ನೀಡಿದರು. ಇದಕ್ಕೂ ಮುನ್ನ ಕಂಬಳ ಕರೆಗಳಿಗೆ ಭಾಗಿಯಾಗಿದ್ದ ಗಣ್ಯರು ಪೂಜೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಂಸದೆ ಶೋಭಾಕರಂದ್ಲಾಜೆ, ಸಂಗೀತ ನಿರ್ದೇಶದ ಗುರು ಕಿರಣ್, ಸಂಸದ ಪಿಸಿ ಮೋಹನ್, ಡಿ.ವಿ ಸದಾನಂದಗೌಡ, ವಿಶ್ವನಾಥ್ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಂಬಳದ ಕಾರ್ಯಕ್ರಮದಲ್ಲಿ ಜಮ್ಮುಕಾಶ್ಮೀರದಲ್ಲಿ ವೀರಮರಣ ಹೊಂದಿದ್ದ ಯೋಧ ಎಂವಿ ಪ್ರಾಂಜಲ್ ಅವರಿಗಾಗಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು. ಇನ್ನು ಕರಾವಳಿಯ ಮಣ್ಣಿನ ಸಂಸ್ಕೃತಿ ಹಾಗೂ ಪ್ರತಿಷ್ಟೆಯ ಪ್ರತೀಕವಾಗಿರುವ ಕಂಬಳವನ್ನು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈಗಾಗಲೇ ಕೋಣಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿವೆ. ಸಾಕಷ್ಟು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದಾರೆ.

Related Posts

Scroll to Top