(ಡಿ.3) ಧಾರ್ಮಿಕ ಹಿನ್ನೆಲೆಯ ಶಿರ್ವ ನಡಿಬೆಟ್ಟು ಕಂಬಳ : ಇತಿಹಾಸದ ಪುಟದಲ್ಲಿ ದಾಖಲಾದ ವೈಭಭ

ಶಿರ್ವ : ತುಳುನಾಡಿನ ಧಾರ್ಮಿಕ ಆಚರಣೆಗಳ ಹಿನ್ನೆಲೆಯಿರುವ 28ನೇ ವರ್ಷದ ಐತಿಹಾಸಿಕ ಶಿರ್ವ ನಡಿಬೆಟ್ಟು ಸೂರ್ಯ – ಚಂದ್ರ ಸಂಪ್ರದಾಯಬದ್ಧ ಜೋಡುಕರೆ ಕಂಬಳವು ಡಿ. 3 ರಂದು ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನಡೆಯಲಿದೆ.

ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಪ್ರಫುಲ್ಲ ಶೆಟ್ಟಿಯವರು ಕಂಬಳವನ್ನು ಉದ್ಘಾಟಿಸಲಿದ್ದಾರೆ.

ಶಿರ್ವ ನಡಿಬೆಟ್ಟು ಮನೆತನದ ಯಜಮಾನ ದಾಮೋದರ ಚೌಟ ಅವರ ಮುಂದಾಳುತ್ವದಲ್ಲಿ ವ್ಯವಸ್ಥಾಪಕ ಶಿರ್ವ ನಡಿಬೆಟ್ಟು ಶಶಿಧರ ಹೆಗ್ಡೆಯವರು ಊರವರ ಸಹಕಾರದೊಂದಿಗೆ ಕಂಬಳ ನಡೆಸಿಕೊಂಡು ಬರುತ್ತಿದ್ದು, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.


ಧಾರ್ಮಿಕ ಹಿನ್ನೆಲೆಯ ಐತಿಹಾಸಿಕ ಕಂಬಳ

ಶತಮಾನಗಳಿಂದ ನಡೆದು ಬರುತ್ತಿರುವ ಐತಿಹಾಸಿಕ ಶಿರ್ವ ನಡಿಬೆಟ್ಟು ಕಂಬಳವು ಧಾರ್ಮಿಕ ಹಿನ್ನೆಲೆಯನ್ನು ಹೊಂದಿದೆ. ಕಂಬಳಕ್ಕೂ ಮುಂಚೆ ಕುದಿ ಕಂಬಳ ನಡೆಯುತ್ತದೆ. ಕಂಬಳದ ಮುನ್ನಾದಿನ ರಾತ್ರಿ ಕಂಬಳ ಗದ್ದೆಯ ಬಳಿ ಕೊರಗ ಜನಾಂಗದವರು ಸಾಂಪ್ರದಾಯಿಕವಾಗಿ ಡೋಲು ಬಾರಿಸಿ ಪನಿಕುಲ್ಲುನು ಎಂಬ ಧಾರ್ಮಿಕ ಆಚರಣೆ ನಡೆಸುತ್ತಾರೆ. ಮನೆತನದಿಂದ ಅಡಿಕೆ ವೀಳ್ಯದೆಲೆಯೊಂದಿಗೆ ಕಾಣಿಕೆ ಪಡೆದು ಮರುದಿನ ಕಂಬಳ ಮುಗಿಯುವವರೆಗೆ ಡೋಲು ಸೇವೆ ನಡೆಸುತ್ತಾರೆ.

ಕಂಬಳದ ದಿನ ಶಿರ್ವ ಮಹತೋಭಾರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಹೂವಿನ ಪೂಜೆ ನಡೆದು, ಗೆಜ್ಜಾಲು ಮತ್ತು ಕಂಬಳದ ಮಂಜೊಟ್ಟಿಯ ನಾಗದೇವರಿಗೆ ತನು ತಂಬಿಲ ಸಮರ್ಪಣೆಯಾದ ಬಳಿಕ ನಡಿಬೆಟ್ಟು ಚಾವಡಿಯ ದೈವ ಜುಮಾದಿಗೆ ಪೂಜೆ ಪುರಸ್ಕಾರ ನಡೆಯುತ್ತದೆ. ಬಳಿಕ ಬಂಟ ಕೋಲ ನಡೆದು ಮೆರವಣಿಗೆಯಲ್ಲಿ ಕೊಂಬು, ವಾದ್ಯಘೋಷಗಳೊಂದಿಗೆ ಮನೆಯ ಕೋಣಗಳನ್ನು ಗದ್ದೆಗಿಳಿಸಲಾಗುವುದು. ಶತಮಾನದ ಹಿಂದಿನ ರೂಢಿಯಂತೆ ಶಿರ್ವ ನಡಿಬೆಟ್ಟು ಮನೆತನದ ಕೋಣಗಳು ಕರೆಗೆ ಇಳಿದು ಅವುಗಳ ಓಟದೊಂದಿಗೆ ಕಂಬಳ ಪ್ರಾರಂಭಗೊಂಡು,ಶಿರ್ವ ನಂಗ್ಯೆಟ್ಟು ಮನೆಯ ಕೋಣಗಳ ಓಟದೊಂದಿಗೆ ಕಂಬಳ ಕೊನೆಗೊಳ್ಳುತ್ತದೆ. ಕಂಬಳ ಮುಗಿದ ಬಳಿಕ ಬಂಟ ದೈವವು ಕಂಬಳ ಕರೆಗೆ ಸುತ್ತು ಹಾಕಿ ಮನೆಗೆ ಹಿಂತಿರುಗಿ ಬಂದು ಅಗೇಲು ಸೇವೆಯೊಂದಿಗೆ ಕಂಬಳ ಪ್ರಕ್ರಿಯೆ ಸಮಾಪನಗೊಳ್ಳುತ್ತದೆ.

ಧಾರ್ಮಿಕ ಹಿನ್ನೆಲೆಯ ಐತಿಹಾಸಿಕ ಕಂಬಳ

ಶತಮಾನಗಳಿಂದ ನಡೆದು ಬರುತ್ತಿರುವ ಐತಿಹಾಸಿಕ ಶಿರ್ವ ನಡಿಬೆಟ್ಟು ಕಂಬಳವು ಧಾರ್ಮಿಕ ಹಿನ್ನೆಲೆಯನ್ನು ಹೊಂದಿದೆ. ಕಂಬಳಕ್ಕೂ ಮುಂಚೆ ಕುದಿ ಕಂಬಳ ನಡೆಯುತ್ತದೆ. ಕಂಬಳದ ಮುನ್ನಾದಿನ ರಾತ್ರಿ ಕಂಬಳ ಗದ್ದೆಯ ಬಳಿ ಕೊರಗ ಜನಾಂಗದವರು ಸಾಂಪ್ರದಾಯಿಕವಾಗಿ ಡೋಲು ಬಾರಿಸಿ ಪನಿಕುಲ್ಲುನು ಎಂಬ ಧಾರ್ಮಿಕ ಆಚರಣೆ ನಡೆಸುತ್ತಾರೆ. ಮನೆತನದಿಂದ ಅಡಿಕೆ ವೀಳ್ಯದೆಲೆಯೊಂದಿಗೆ ಕಾಣಿಕೆ ಪಡೆದು ಮರುದಿನ ಕಂಬಳ ಮುಗಿಯುವವರೆಗೆ ಡೋಲು ಸೇವೆ ನಡೆಸುತ್ತಾರೆ. ಕಂಬಳದ ದಿನ ಶಿರ್ವ ಮಹತೋಭಾರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಹೂವಿನ ಪೂಜೆ ನಡೆದು, ಗೆಜ್ಜಾಲು ಮತ್ತು ಕಂಬಳದ ಮಂಜೊಟ್ಟಿಯ ನಾಗದೇವರಿಗೆ ತನು ತಂಬಿಲ ಸಮರ್ಪಣೆಯಾದ ಬಳಿಕ ನಡಿಬೆಟ್ಟು ಚಾವಡಿಯ ದೈವ ಜುಮಾದಿಗೆ ಪೂಜೆ ಪುರಸ್ಕಾರ ನಡೆಯುತ್ತದೆ. ಬಳಿಕ ಬಂಟ ಕೋಲ ನಡೆದು ಮೆರವಣಿಗೆಯಲ್ಲಿ ಕೊಂಬು, ವಾದ್ಯಘೋಷಗಳೊಂದಿಗೆ ಮನೆಯ ಕೋಣಗಳನ್ನು ಗದ್ದೆಗಿಳಿಸಲಾಗುವುದು. ಶತಮಾನದ ಹಿಂದಿನ ರೂಢಿಯಂತೆ ಶಿರ್ವ ನಡಿಬೆಟ್ಟು ಮನೆತನದ ಕೋಣಗಳು ಕರೆಗೆ ಇಳಿದು ಅವುಗಳ ಓಟದೊಂದಿಗೆ ಕಂಬಳ ಪ್ರಾರಂಭಗೊಂಡು,ಶಿರ್ವ ನಂಗ್ಯೆಟ್ಟು ಮನೆಯ ಕೋಣಗಳ ಓಟದೊಂದಿಗೆ ಕಂಬಳ ಕೊನೆಗೊಳ್ಳುತ್ತದೆ. ಕಂಬಳ ಮುಗಿದ ಬಳಿಕ ಬಂಟ ದೈವವು ಕಂಬಳ ಕರೆಗೆ ಸುತ್ತು ಹಾಕಿ ಮನೆಗೆ ಹಿಂತಿರುಗಿ ಬಂದು ಅಗೇಲು ಸೇವೆಯೊಂದಿಗೆ ಕಂಬಳ ಪ್ರಕ್ರಿಯೆ ಸಮಾಪನಗೊಳ್ಳುತ್ತದೆ.

Scroll to Top