ಉಡುಪಿ, ಡಿ.08: ರೋಗಿಗಳಿಗೆ ಸೇವೆ ನೀಡುತ್ತಿರುವಾಗಲೇ ವೈದ್ಯೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಡಿ.8ರ ಗುರುವಾರ ನಡೆದಿದೆ.
ಮೃತ ವೈದ್ಯರನ್ನು ಡಾ. ಶಶಿಕಲಾ ಎಂದು ಗುರುತಿಸಲಾಗಿದೆ.
ಹೊರರೋಗಿಗಳ ವಿಭಾಗದಲ್ಲಿ ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ಕುಸಿದು ಬಿದ್ದ ಡಾ. ಶಶಿಕಲಾ ಅವರನ್ನುಜಿಲ್ಲಾಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಅಷ್ಟರಲ್ಲಿ ಶಶಿಕಲಾ ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದ ಡಾ. ಶಶಿಕಲಾ ಅವರನ್ನು ವೈದ್ಯರ ಕೊರತೆಯ ಹಿನ್ನಲೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಮುಂದುವರಿಸಲಾಗಿತ್ತು.