10 ಸಾವಿರ ರೂಪಾಯಿ ಲಂಚ ಸ್ವೀಕರಿಸ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ

ಉಡುಪಿ: ಕುಂದಾಪುರ ತಾಲೂಕು ಬೇಳೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೇಳೂರು ಪಿಡಿಓ ಜಯಂತ್ ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದವರು.

ಬಸವ ವಸತಿ ಯೋಜನೆಯ ಫಲಾನುಭವಿಗಳಿಗೆ ಹಣ ನೀಡಲು ಲಂಚದ ಬೇಡಿಕೆ ಇಟ್ಟಿದ್ದರು. ಯೋಜನೆಯ ಹಣ ಮಂಜೂರು ಮಾಡಲು 10 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ತೆಕ್ಕಟ್ಟೆ ಜಂಕ್ಷನ್ ಬಳಿ ದೂರುದಾರರಿಂದ 10 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ.

ಪಿಡಿಓ ಜಯಂತ್ ವಿರುದ್ಧ ಲಂಚದ ಪ್ರಕರಣ ದಾಖಲಾಗಿದೆ.

Scroll to Top