ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳ ಕಾಲ 12 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್ 1 ಹಾಗೂ 2 ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹುಣಸಗಿ, ಮುನಿರಾಬಾದ್, ಇಳಕಲ್, ಮುದಗಲ್, ಜೇವರ್ಗಿ, ಹಗರಿಬೊಮ್ಮನಹಳ್ಳಿ, ಸಂಡೂರು, ಕುಷ್ಟಗಿ, ರೋಣ, ಕುರುಗೋಡು, ಕೂಡ್ಲಿಗಿ, ಪಾವಗಡದಲ್ಲಿ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಕೆಲವು ಬಾರಿ ಮಳೆ, ಗುಡುಗಿನಿಂದ ಕೂಡಿದ ಮಳೆ, ಒಮ್ಮೊಮ್ಮೆ ಭಾರಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಹಾಗೂ 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Scroll to Top