ಶಿರ್ವ: ಕಲ್ಲೊಟ್ಟು ಸೊರ್ಪು ಪರಿಸರದಲ್ಲಿ ಚಿರತೆ ಹಾವಳಿ

ಶಿರ್ವ: ಇಲ್ಲಿನ ಗ್ರಾ. ಪಂ.ವ್ಯಾಪ್ತಿಯ ಕಲ್ಲೊಟ್ಟು, ಸೊರ್ಪು,ಆಗೋಳಿಬೈಲು, ಪದವು ಪರಿಸರದಲ್ಲಿ ಕಳೆದ ಐದಾರು ದಿನಗಳಿಂದ ಚಿರತೆಯೊಂದು ಓಡಾಡುತ್ತಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಶಿರ್ವ ಗ್ರಾ.ಪಂ. ಅಧ್ಯಕ್ಷ ರತನ್‌ ಶೆಟ್ಟಿಯವರು ನೀಡಿದ ಮಾಹಿತಿಯಂತೆ ಅರಣ್ಯ ಇಲಾಖೆಯವರು ಅಗೋಳಿಬೈಲು ಸಮೀಪ ದರ್ಕಾಸು ಬಳಿ ಚಿರತೆ ಹಿಡಿಯಲು ಗುರುವಾರ ಬೋನು ಇಟ್ಟಿದ್ದಾರೆ. ಚಿರತೆ ಪದವು ಮುಟ್ಲುಪಾಡಿ ರಸ್ತೆಯಲ್ಲಿ ಓಡಾಡುತ್ತಿರುವುದನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರೆಂದು ನಂಬಲಾದ ವಿಡಿಯೋವೊಂದು ವೈರಲ್‌ ಆಗಿದೆ.

ಈ ರಸ್ತೆಯಲ್ಲಿ ಪ್ರತೀದಿನ ಶಿರ್ವದ ವಿವಿಧ ಶಾಲಾ ಕಾಲೇಜುಗಳಿಗೆ ಕಾಲ್ನಡಿಗೆಯಲ್ಲಿ ಹೋಗುವ ವಿದ್ಯಾರ್ಥಿಗಳು, ವಿವಿಧ ಸ್ಥಳಗಳಿಗೆ ಕೆಲಸಕ್ಕೆ ಹೋಗುವ ಪರಿಸರದ ನಾಗರಿಕರು, ವಾಹನ ಸವಾರರು ಭಯಭೀತರಾಗಿದ್ದು, ಗ್ರಾ.ಪಂ. ಆಡಳಿತ ಮತ್ತು ಅರಣ್ಯ ಇಲಾಖೆ ಸಮಸ್ಯೆಗೆ ತುರ್ತು ಪರಿಹಾರ ಒದಗಿಸಬೇಕಾಗಿದೆ.

You cannot copy content from Baravanige News

Scroll to Top