ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಕೇರಳದಲ್ಲಿ ಒಂದೇ ದಿನ 300ಕ್ಕೂ ಹೆಚ್ಚು ಕೋವಿಡ್ ಪ್ರಕರಣ : ಮೂವರು ಸಾವು

ನವದೆಹಲಿ : ಕೇರಳದಲ್ಲಿ 24 ಗಂಟೆಗಳ ಅವಧಿಯಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡಿದ್ದು, 300 ಜನರಲ್ಲಿ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಕೇರಳದ ಸಕ್ರೀಯ ಪ್ರಕರಣಗಳ ಸಂಖ್ಯೆ 2341ಕ್ಕೆ ಏರಿದೆ.

ಒಂದು ದಿನದ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 358 ಪ್ರಕರಣಗಳು ವರದಿಯಾಗಿದ್ದು, ಮೂವರು ಮೃತಪಟ್ಟಿದ್ದಾರೆ. ದೇಶದಾದ್ಯಂತ ಸಕ್ರಿಯ ಪ್ರಕರಣಗಳ ಸಂಖ್ಯೆ 2669 ಕ್ಕೆ ತಲುಪಿದೆ.

ಕೋವಿಡ್ ಸಾಂಕ್ರಾಮಿಕ ತೀವ್ರಗೊಳ್ಳುತ್ತಿದ್ದಂತೆಯೇ ಕೇಂದ್ರ ಆರೋಗ್ಯ ಸಚಿವಾಲಯ, ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ರಾಜ್ಯಗಳಿಗೂ ಈ ಕುರಿತು ಸೂಚನೆ ನೀಡಲಾಗಿದೆ. ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ನಡುವಿನ ಜಂಟಿ ಪ್ರಯತ್ನಗಳ ಮಹತ್ವವನ್ನು ಒತ್ತಿ ಹೇಳಿದ್ದಾರೆ. ಜೊತೆಗೆ ಟೆಸ್ಟಿಂಗ್ ಹೆಚ್ಚಿಸುವಂತೆ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ.

ಕೊರೊನಾ ವೈರಸ್ನ ಉಪ ತಳಿಗಳ ವಿರುದ್ಧ ಹೆಚ್ಚಿನ ಸನ್ನದ್ಧತೆಯ ಅಗತ್ಯವನ್ನು ಮಾಂಡವಿಯಾ ಒತ್ತಿ ಹೇಳಿದ್ದಾರೆ.

ಹೊಸ ರೂಪಾಂತರಗಳನ್ನು ಪತ್ತೆಹಚ್ಚಲು ಅನುಕೂಲವಾಗುವಂತೆ ಜೀನೋಮಿಕ್ ಲ್ಯಾಬ್‌ಗಳಿಗೆ ಎಲ್ಲಾ ಕೋವಿಡ್-ಪಾಸಿಟಿವ್ ಪ್ರಕರಣಗಳ ಮಾದರಿಗಳನ್ನು ಕಳುಹಿಸಲು ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದೆ.

ಹೊಸದಾಗಿ ಗುರುತಿಸಲಾದ JN.1 ಸಬ್‌ವೇರಿಯಂಟ್‌ಗೆ ಸಂಬಂಧಿಸಿದಂತೆ, ವೈಜ್ಞಾನಿಕ ಅಧ್ಯಯನ ನಡೆಸಲಾಗುತ್ತಿದೆ. ತಕ್ಷಣಕ್ಕೆ ಯಾರೂ ಆತಂಕಗೊಳ್ಳಬೇಕಿಲ್ಲ ಎಂದು ಆರೋಗ್ಯ ಸಚಿವಾಲಯವು ಹೇಳಿದೆ.

Related Posts

Scroll to Top