ಪ್ರಥಮ ಪಿಯು ವಿದ್ಯಾರ್ಥಿಗೆ ಹೃದಯಾಘಾತ; ಉಡುಪಿಯಲ್ಲಿ ಆಸ್ಪತ್ರೆಗೆ ಸಾಗಿಸುವಾಗ ದಾರುಣ ಸಾವು

ಉಡುಪಿ : ಪ್ರಥಮ ಪಿಯು ಓದುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

17 ವರ್ಷದ ಅಫ್ಕಾರ್ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ.

ಮೃತ ಅಫ್ಕಾರ್‌ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿದ್ದ. ಸ್ಟೂಡೆಂಟ್ ಇಸ್ಲಾಮಿಕ್ ಅರ್ಗನೈಸೇಶನ್ ಆಫ್ ಇಂಡಿಯಾದಲ್ಲಿ ಸಕ್ರಿಯ ಸದಸ್ಯನೂ ಕೂಡ ಆಗಿದ್ದ.

ಕಳೆದ ಡಿಸೆಂಬರ್ 6ರಂದೇ ಅಫ್ಕಾರ್‌ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದ. ಡಿಸೆಂಬರ್ 18 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದ. ಊರಿಗೆ ಹಿಂದಿರುಗಿದ ಸಂದರ್ಭದಲ್ಲೇ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿತ್ತು. ಇಂದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಫ್ಕಾರ್ ಮೃತಪಟ್ಟಿದ್ದಾನೆ.

ಈತ ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.

You cannot copy content from Baravanige News

Scroll to Top