ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಸಂಭ್ರಮ- ಮಾಲಾಧಾರಿಗಳಿಂದ ದತ್ತಪಾದುಕೆ ದರ್ಶನ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಕೊನೆ ದಿನವಾದ ಇಂದು ಪಾದುಕೆ ದರ್ಶನ ನಡೆಯಲಿದೆ.

ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಮಾಲಾಧಾರಿಗಳು ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾವಿರಾರು ದತ್ತಮಾಲಾಧಾರಿಗಳು ಆಗಮಿಸಲಿದ್ದಾರೆ. ದತ್ತ ಗುಹೆ ಮುಂಭಾಗದ ತುಳಸಿ ಕಟ್ಟೆಯ ಬಳಿ ಹೋಮ-ಹವನ-ಪೂಜೆ ನಡೆಯುತ್ತಿದೆ.

ದತ್ತಜಯಂತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ನಗರದ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳು ಬಂದ್ ಮಾಡಲಾಗಿದೆ. ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ತೆರಳುವ ಮಾರ್ಗದಲ್ಲಿ ಅಂಗಡಿ ಮುಂಗಟ್ಟು ಸಂಪೂರ್ಣ ಬಂದ್ ಆಗಿದೆ.

ನಿನ್ನೆ ದತ್ತ ಜಯಂತಿಯ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗದಳ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಸಲಾಯಿತು. ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತಾತ್ರೇಯನಿಗೆ ವಿಶೇಷ ಪೂಜೆ ಸಲ್ಲಿಸಿ ಶೋಭಾಯಾತ್ರೆಗೆ ಚಾಲನೆ ನೀಡಿದರು. ಬಸವನಹಳ್ಳಿ ಮುಖ್ಯ ರಸ್ತೆ, ಹನುಮಂತಪ್ಪ ವೃತ್ತ, ಎಂ.ಜಿ.ರಸ್ತೆ ಮೂಲಕ ಸಾಗಿದ ಶೋಭಾಯಾತ್ರೆ ಆಜಾದ್ ವೃತ್ತದಲ್ಲಿ ಕೊನೆಗೊಂಡಿತು.

You cannot copy content from Baravanige News

Scroll to Top