28ರ ಯುವಕನಿಗೆ 35 ವರ್ಷದ ಮಹಿಳೆ ಜೊತೆ ಅಕ್ರಮ ಸಂಬಂಧ; ಒಂದೇ ಮರಕ್ಕೆ ನೇಣು ಹಾಕಿಕೊಂಡ ಜೋಡಿ

ಕೋಲಾರ, ಡಿ.27: ಅಕ್ರಮ ಸಂಬಂಧ ಹಿನ್ನೆಲೆ ಮಹಿಳೆ ಮತ್ತು ಯವಕ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಎಸ್.ಜೀಡಮಾಕಲಪಲ್ಲಿ ಗ್ರಾಮದಲ್ಲಿ ನಡೆದಿದೆ.

ಮಹಿಳೆ ಅನಸೂಯ ಹಾಗೂ ಯುವಕ ವಿಜಯ್ ಕುಮಾರ್ ಆತ್ಮಹತ್ಯೆಗೆ ಶರಣಾದವರು.

28 ವರ್ಷದ ವಿಜಯ್ ಕುಮಾರ್ 35 ವರ್ಷದ ಅನಸೂಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದನು. ಕಳೆದ ಎರಡು ತಿಂಗಳ ಹಿಂದೆ ಇಬ್ಬರು ಊರು ಬಿಟ್ಟು ನಾಪತ್ತೆಯಾಗಿದ್ದರು. ಆದರೆ ಕಳೆದ ರಾತ್ರಿ ಗ್ರಾಮದ ಹೊರಗಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You cannot copy content from Baravanige News

Scroll to Top