ಶಿರ್ವ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟಕಲ್ಲು ಪೇಟೆಯ ಬ್ಯಾರಿಕೇಡ್ ಬಳಿ ಬೈಕ್‌ಗೆ ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಅ. 6 ರಂದು ಮಧ್ಯಾಹ್ನ ನಡೆದಿದೆ.
ಬಂಟಕಲ್ಲಿನ ಬೈದಶ್ರೀ ಫ್ಯಾನ್ಸಿ ಸ್ಟೋರ್‌ನ ಮಾಲಕ ಶಂಕರ ಕೋಟ್ಯಾನ್ (60) ಮೃತಪಟ್ಟವರು.
ಗುರುವಾರ ಮಧ್ಯಾಹ್ನ ಬೈಕ್‌ಗೆ ಪೆಟ್ರೋಲ್ ಹಾಕಲು ಪೆಟ್ರೋಲ್ ಪಂಪ್‌ಗೆ ತೆರಳುತ್ತಿದ್ದ ವೇಳೆ ಬಂಟಕಲ್ಲು ಪೇಟೆಯಲ್ಲಿನ ಬ್ಯಾರಿಕೇಡ್ ಬಳಿ ಶಂಕರಪುರ ಕಡೆಯಿಂದ ವೇಗವಾಗಿ ಬಂದ ರಿಕ್ಷಾ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಬೈಕ್ ಸವಾರ ಶಂಕರ್ ಕೋಟ್ಯಾನ್ ಅವರನ್ನು ಸಾರ್ವಜನಿಕರು ಸೇರಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದ್ದು, ತಲೆಗೆ ಗಂಭೀರ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.