ಹೊಸ ವರ್ಷದ ಪಾರ್ಟಿಗೆ 193 ಕೋಟಿ ಮೌಲ್ಯದ ಎಣ್ಣೆ ಸೇಲ್

ಬೆಂಗಳೂರು : ಹೊಸ ವರ್ಷ ಬರಮಾಡಿಕೊಳ್ಳುವ ಸಂಭ್ರಮಾಚರಣೆಯಲ್ಲಿ ಮದ್ಯದ ಕಿಕ್ ಕೂಡ ಜೋರಾಗಿತ್ತು. ನ್ಯೂ ಇಯರ್ ಗೆ ಸರ್ಕಾರದ ಬೊಕ್ಕಸಕ್ಕೆ ಎಣ್ಣೆ ಕಾಸು ಹರಿದು ಬಂದಿದೆ.

2023ರ ಕೊನೆಯ ದಿನವಾದ ಭಾನುವಾರದಿಂದು 193 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಈ ಮೂಲಕ ಒಂದೇ ದಿನ ಭರ್ಜರಿ ಲಿಕ್ಕರ್ ಸೇಲ್ ಆಗಿದೆ. ಡಿಸೆಂಬರ್ ತಿಂಗಳಲ್ಲಿ ಇಂಡಿಯನ್ ಮೇಡ್ ಲಿಕ್ಕರ್ 3,07,953 ಬಾಕ್ಸ್‌, ಬಿಯರ್ 1,95,005 ಬಾಕ್ಸ್ ಮಾರಾಟವಾಗಿದೆ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ 2,611 ಕೋಟಿ ಆದಾಯ ಬಂದಿತ್ತು. ಈ ವರ್ಷ ಡಿಸೆಂಬರ್ ತಿಂಗಳಲ್ಲಿ 3 ಸಾವಿರ ಕೋಟಿ ಆದಾಯ ಸಂಗ್ರಹವಾಗಿದೆ.

ಒಟ್ಟಿನಲ್ಲಿ ಎರಡು ವರ್ಷಕ್ಕೆ ಹೋಲಿಸಿದರೆ ಈ ವರ್ಷದಲ್ಲಿ ಮದ್ಯ ಮಾರಾಟದಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚು ಆದಾಯ ಹರಿದುಬಂದಿದೆ. ನಗರ ಹಾಗೂ ಗ್ರಾಮೀಣ ಭಾಗದ ಮೂಲೆ ಮೂಲೆಯಲ್ಲಿಯೂ ಜನರು ಮದ್ಯದ ನಶೆಯ ಮೂಲಕ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ.

You cannot copy content from Baravanige News

Scroll to Top