ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮನ ವಿಗ್ರಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ

ನವದೆಹಲಿ : ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಜ, 22 ರಂದು ಪ್ರತಿಷ್ಠಾಪನೆಗೊಳ್ಳಲಿರುವ ಮೂರ್ತಿಯನ್ನು ಅಂತಿಮಗೊಳಿಸಲಾಗಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆಯ ಮೂರ್ತಿಗೆ ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಮಾಡಲಾಗುತ್ತಿದೆ ಎಂದು ರಾಮಮಂದಿರ ಟ್ರಸ್ಟ್ ಮೂಲಗಳಿಂದ ತಿಳಿದುಬಂದಿದೆ.

ದೇಶದ ಮೂವರು ಪ್ರಮುಖ ಶಿಲ್ಪಿಗಳಾದ ಮೈಸೂರಿನ ಅರುಣ್ ಯೋಗಿರಾಜ್, ಬೆಂಗಳೂರಿನ ಜಿ.ಎಲ್.ಭಟ್ ಮತ್ತು ರಾಜಸ್ಥಾನದ ಸತ್ಯನಾರಾಯಣ ಪಾಂಡೆ ಅವರಿಗೆ ರಾಮಲಲ್ಲಾ ಮೂರ್ತಿಯನ್ನು ತಯಾರಿಸುವ ಜವಾಬ್ದಾರಿಯನ್ನು ವಹಿಸಲಾಗಿತ್ತು. ಮೂವರೂ ಶಿಲ್ಪಿಗಳು ತಮ್ಮ ಕಲ್ಪನೆಯ ರಾಮ ಲಲ್ಲಾನ ಮೂರ್ತಿಯನ್ನು ಕೆತ್ತಿ ಹಸ್ತಾಂತರ ಕೂಡ ಮಾಡಿದ್ದರು.

ಇನ್ನು ಈಗಾಗಲೇ ಹಸ್ತಾಂತವಾಗಿರುವ ಮೂರ್ತಿಗಳ ಪೈಕಿ ಒಂದನ್ನು ಆಯ್ಕೆ ಮಾಡಲು ಟ್ರಸ್ಟ್ ಒಂದು ಸಮಿತಿಯನ್ನು ರಚನೆ ಮಾಡಿತ್ತು. ಈ ಸಮಿತಿ ಮೂರು ಮೂರ್ತಿಗಳ ಕೆತ್ತನೆಗೆ ಗುಣಮಟ್ಟ, ರಾಮನ ಬಾಲ್ಯದ ನೋಟ, ದೈವತ್ವ ಭಾವವನ್ನು ಪರಿಶೀಲಿಸಿದರು. ಬಳಿಕ ರಾಮ ಜನ್ಮಭೂಮಿ ಟ್ರಸ್ಟ್‌ನ ಸದಸ್ಯರ ನಡುವೆ ಮತದಾನ ನಡೆದು ಮೈಸೂರಿನ ಶಿಲ್ಪಿ ಯೋಗಿರಾಜ್‌ ಅವರ ಮೂರ್ತಿಯನ್ನು ಆಯ್ಕೆ ಮಾಡಲಾಯಿತು ಎಂದು ತಿಳಿದುಬಂದಿದೆ.

Scroll to Top