ಲಕ್ಷಾಂತರ ಮೌಲ್ಯದ ಸೀಸ ಕಳ್ಳತನ : ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ಉಡುಪಿ : ಕಳ್ಳರ ಕೈಚಳಕದಿಂದ ಲಕ್ಷಾಂತರ ರೂಪಾಯಿಯ ಸೀಸಾ ಕಳ್ಳತನವಾದ ಘಟನೆ ಉಡುಪಿಯ ಗಂಗೊಳ್ಳಿಯಲ್ಲಿ ನಡೆದಿದೆ.

ಬೈಂದೂರು ತಾಲೂಕು ಗಂಗೊಳ್ಳಿಯ ಮ್ಯಾಂಗನೀಸ್ ರೋಡ್ ಬಳಿ ಇರುವ ಅಕ್ಷಯ ಖಾರ್ವಿ ಅವರಿಗೆ ಸೇರಿದ ಅಂಗಡಿಯಲ್ಲಿ ಈ ಕಳ್ಳತನ ನಡೆದಿದೆ.

ಅಂಗಡಿಗೆ ನುಗ್ಗಿದ್ದ ಕಳ್ಳರು ಅಂಗಡಿಯಲ್ಲಿ ಇರಿಸಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸೀಸ ಎಗರಿಸಿ ಪರಾರಿಯಾಗಿದ್ದಾರೆ.

ಕಳ್ಳರ ಕೈಚಳಕದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದರ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಶ್ಫಕ್‌ ಎಂದು ಗುರುತಿಸಲಾಗಿದ್ದು, ಉಳಿದ ಆರೋಪಿಗಳಿಗೆ ಗಂಗೊಳ್ಳಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

You cannot copy content from Baravanige News

Scroll to Top