ಉಡುಪಿ : ಕಾರ್ಕಳದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಅಕ್ರಮ ಕಾಮಗಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.
ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ, ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ದೂರು ಕೇಳಿ ಬಂದಿತ್ತು.
ಆದೇಶದಲ್ಲೇನಿದೆ..!??
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಫೆ.2 ರಂದು ಬರೆದ ಪತ್ರದಲ್ಲಿ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯಲ್ಲಿ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ ನಡೆದ ಹಾಗೂ ಜನರ ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಕುರಿತು ದೃಶ್ಯ ಮಾಧ್ಯಮ ಮತ್ತು ದಿನ ಪತ್ರಿಕೆಗಳು ವರದಿ ಮಾಡಿರುವುದು ತಿಳಿದುಬಂದಿದೆ. ಈ ಕುರಿತು ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು ಸಿಒಡಿ ಅಥವಾ ಉನ್ನತ ಮಟ್ಟದ ತನಿಖೆ ನಡೆದಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿನಂತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಒಡಿ ತನಿಖೆಗೆ ಆದೇಶಿಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಡಿಸಿರುವ ಆದೇಶದಲ್ಲಿ ಹೇಳಲಾಗಿದೆ.