ಆಪರೇಷನ್ ಥಿಯೇಟರ್ ನಲ್ಲಿ ಪ್ರಿ- ವೆಡ್ಡಿಂಗ್ ಶೂಟ್- ಎಡವಟ್ಟು ಮಾಡಿಕೊಂಡ ವೈದ್ಯ..!

ಚಿತ್ರದುರ್ಗ : ಇತ್ತೀಚಿನ ದಿನಗಲ್ಲಿ ವಿಭಿನ್ನ ರೀತಿಯಲ್ಲಿ ಫೋಟೋಶೂಟ್ ಗಳು ನಡೆಯುತ್ತಿರುವುದನ್ನು ನೋಡುತ್ತಿರುತ್ತೇವೆ. ಆದರೆ ಇಲ್ಲೊಂದು ಜೋಡಿಗಳು ಪ್ರಿ-ವೆಡ್ಡಿಂಗ್ ಶೂಟ್ ಅನ್ನು ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಮಾಡಿ ಎಡವಟ್ಟಿಗೆ ಸಿಲುಕಿಕೊಂಡಿರುವ ಘಟನೆ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.

ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಎಡವಟ್ಟು ಮಾಡಿಕೊಂಡವರು.

ಜಿಲ್ಲಾಸ್ಪತ್ರೆಯಲ್ಲಿ ವೈದ್ಯ ಡಾ.ಅಭಿಷೇಕ್ ಅವರು ರೋಗಿಯೊಬ್ಬರನ್ನು ಬೆಡ್‌ ಮೇಲೆ ಮಲಗಿಸಿ, ಆಪರೇಷನ್‌ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿ ಅಭಿಷೇಕ್‌ಗೆ ಸಹಾಯ ಮಾಡುವಂತೆ ಪ್ರಿ-ವೆಡ್ಡಿಂಗ್ ಶೂಟ್ ಮಾಡಿದ್ದಾರೆ.

ಅಂತಿಮವಾಗಿ ಆಪರೇಷನ್‌ ಮುಗಿಯಿತು ಅಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುತ್ತಾನೆ. ಈ ಎಲ್ಲಾ ದೃಶ್ಯಗಳನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

You cannot copy content from Baravanige News

Scroll to Top