ಹೊನ್ನಾವರ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ!

ಹೊನ್ನಾವರ : ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಖರ್ವಾ ತಿರುವಿನಲ್ಲಿ ಬೆಳಗ್ಗೆ ಸಂಬಂಧಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಬಗ್ಗೆ ವರದಿಯಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಟೆಂಪೋವೊಂದು ಪಲ್ಟಿಯಾಗಿದ್ದು, ಓರ್ವ ಮೃತಪಟ್ಟು 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಗೇರುಸೊಪ್ಪಾ ಕಡೆಯಿಂದ ಹೊನ್ನಾವರಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗ ಖರ್ವಾ ಸಮೀಪ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಜಲವಳ್ಳಕರ್ಕಿಯ ಹನುಂಮತ ಪೂಜಾರಿ ಎನ್ನುವರರನ್ನ ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಸರಳಗಿಯ ಮಹೇಶ ನಾಯ್ಕ ಎನ್ನುವವರಿಗೆ ತಲೆ ಭಾಗಕ್ಕೆ ಗಂಭೀರ ಗಾಯ ಸಂಭವಿಸಿರುವುದರಿಂದ ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You cannot copy content from Baravanige News

Scroll to Top