ಪುತ್ತೂರು : ತಡರಾತ್ರಿ ಓದಿ ಮಲಗಿದ್ದ ಕಾಲೇಜು ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ..!

ಪುತ್ತೂರು : ಕೋವಿಡ್ ಸಾಂಕ್ರಾಮಿಕದ ಬಳಿಕ ಹೃದಯಾಘಾತಗಳ ಸಂಖ್ಯೆ ಏರುತ್ತಲಿದೆ. ಇಳಿವಯಸ್ಸಿನಲ್ಲಿ ಹೃದಯಾಘಾತಗಳು ಸಹಜವಾಗಿದ್ದರೂ ಹದಿಹರೆಯದವರು ಇದಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿಯಾಗಿದೆ.

ಕಾಲೇಜೊಂದರಲ್ಲಿ ಕಲಿಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿನಿ ದಿಢೀರ್ ಹೃದಯಾಘಾತಕ್ಕೆ ತುತ್ತಾಗಿ ಮಲಗಿದ್ದಲ್ಲೇ ಮೃತಪಟ್ಟ ಘಟನೆ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯು ಉಪ್ಪಿನಂಗಡಿ ಸಮೀಪ ನಡೆದಿದೆ.

ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಿವಾಸಿ ಉದ್ಯಮಿ ದಾವೂದ್ ಅವರ ಪುತ್ರಿ ಹಫೀಝಾ (17) ಮೃತ ವಿದ್ಯಾರ್ಥಿನಿಯಾಗಿದ್ದಾಳೆ.

ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಹಫೀಝಾ ಕಲಿಯುತ್ತಿದ್ದರು. ಬುಧವಾರ ತಡರಾತ್ರಿ ವರೆಗೆ ಅಭ್ಯಾಸದಲ್ಲಿ ತೊಡಗಿಸಿ ಕೊಂಡಿದ್ದ ಆಕೆ ಬಳಿಕ ಮಲಗಲು ಹೋಗಿದ್ದಾಳೆ . ಗುರುವಾರ ಬೆಳಗ್ಗೆ ಎದ್ದೇಳದೇ ಇರುವುದನ್ನು ಕಂಡು ಮನೆಯವರು ಎಬ್ಬಿಸಲು ಹೋದಾಗ ಹಫೀಝಾ ಇಹಲೋಕ ತ್ಯಜಿಸಿದ್ದಳು. ಉಪ್ಪಿನಂಗಡಿಯ ಇಂಡಿಯನ್ ಸ್ಕೂಲ್‌ನ ಹಳೇ ವಿದ್ಯಾರ್ಥಿನಿಯಾಗಿದ್ದ ಹಫೀಝಾ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು. .

You cannot copy content from Baravanige News

Scroll to Top