ದ.ಕ., ಉಡುಪಿ ಜಿಲ್ಲೆ ಸೇರಿದಂತೆ 15 ಜಿಲ್ಲೆಗಳಲ್ಲಿ ಶೇ. 100 ಗುರಿ ತಲುಪಿದ ಪಲ್ಸ್ ಪೋಲಿಯೊ

ಬೆಂಗಳೂರು : ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 15 ಜಿಲ್ಲೆಗಳು ಪಲ್ಸ್ ಪೋಲಿಯೊ ಅಭಿಯಾನದಲ್ಲಿ ಶೇಕಡ 100 ರಷ್ಟು ಸಾಧನೆಗೈದಿದೆ.

ಆರೋಗ್ಯ ಇಲಾಖೆ ರಾಜ್ಯಾದ್ಯಂತ ಮೂರು ದಿನಗಳ ಪಲ್ಸ್ ಪೊಲೀಯೊ ಅಭಿಯಾನವನ್ನು ಹಮ್ಮಿಕೊಂಡಿತ್ತು. 2ನೇ ದಿನವಾದ ಸೋಮವಾರದಂದು ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.

ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ವಿಜಯನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ರಾಮನಗರ, ಬೆಂಗಳೂರು ನಗರ, ದಾವಣಗೆರೆ, ಕೋಲಾರ, ಶಿವಮೊಗ್ಗ, ಕೊಪ್ಪಳ, ಮೈಸೂರು ಜಿಲ್ಲೆಗಳು ಶೇ. 100 ಗುರಿ ತಲುಪಿದೆ.

You cannot copy content from Baravanige News

Scroll to Top