ನವದೆಹಲಿ, ಮಾ.08: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವೇ ಪ್ರಧಾನಿ ಮೋದಿ ದೇಶದ ಜನತೆಗೆ ಉಡುಗೊರೆ ನೀಡಿದ್ದು, ಎಲ್ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡಿ ಘೋಷಣೆ ಮಾಡಿದ್ದಾರೆ.
ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಂದೇಶ ಪ್ರಕಟಿಸಿರುವ ಮೋದಿ, “ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ₹ 100 ರಷ್ಟು ಕಡಿಮೆ ಮಾಡಲು ನಿರ್ಧರಿಸಿದೆ. ಇದು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ, ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ” ಎಂದು ಅವರ ಪೋಸ್ಟ್ ಮಾಡಿದ್ದಾರೆ.
“ಅಡುಗೆ ಅನಿಲವನ್ನು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇವೆ. ಜತೆಗೆ, ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಇದು ಮಹಿಳೆಯರ ಸಬಲೀಕರಣ ಮತ್ತು ಅವರಿಗೆ ‘ಸುಲಭವಾಗಿ ಬದುಕಲು’ ಖಾತ್ರಿಪಡಿಸುವ ನಮ್ಮ ಬದ್ಧತೆಗೆ ಪೂರಕವಾಗಿದೆ ” ಎಂದು ಹೇಳಿದ್ದಾರೆ.
ಉಜ್ವಲ ಯೋಜನೆಯಡಿ ಸಿಲಿಂಡರ್ ಬೆಲೆಯ ಮೇಲಿನ 300 ರೂಪಾಯಿ ರಿಯಾಯಿತಿಯನ್ನು ಮುಂದಿನ ಒಂದು ವರ್ಷಕ್ಕೆ ಮುಂದುವರಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ನಿರ್ಧಾರ ಕೈಗೊಂಡಿತ್ತು. ಇದಲ್ಲದೇ, ಎಲ್ಲಾ ಸಾಮಾನ್ಯ ಸಿಲಿಂಡರ್ ಗ್ರಾಹಕರಿಗೆ ಪ್ರತಿ ಸಿಲಿಂಡರ್ಗೆ 100 ರೂ. ದರ ಇಳಿಕೆ ಅನ್ವಯವಾಗಲಿದೆ. .
್ದೆಹಲಿಯಲ್ಲಿ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ನ ಬೆಲೆ ಸುಮಾರು 900 ರೂಪಾಯಿಗಳಿವೆ.