ದೆಹಲಿ: ಹಿಜಾಬ್ ವಿವಾದದ ಬಗ್ಗೆ ನ್ಯಾಯಾಧೀಶರು ವಿಭಜಿತ ತೀರ್ಪು ನೀಡಿರುವುದರಿಂದ ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್ನ ಹಿಜಾಬ್ ತೀರ್ಪು ಊರ್ಜಿತದಲ್ಲಿ ಇರುತ್ತದೆ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಮುಖ್ಯ ನ್ಯಾಯಮೂರ್ತಿ ಪ್ರಕರಣದ ವಿಚಾರಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಅನಂತರವಷ್ಟೇ ಸುಪ್ರೀಂಕೋರ್ಟ್ನ ಆದೇಶ ಪ್ರಕಟವಾಗಲಿದ್ದು, ಅದು ಹೈಕೋರ್ಟ್ ಆದೇಶದ ಜಾಗದಲ್ಲಿ ಊರ್ಜಿತಕ್ಕೆ ಬರಲಿದೆ. ಹೀಗಾಗಿ ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್ನ ಆದೇಶ ಯಥಾಸ್ಥಿತಿ ಮುಂದುವರಿಯಲಿದ್ದು, ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಕಾನೂನು ತಜ್ಞರು ಹಾಗೂ ವಕೀಲರು ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ!
