ಹಾಲಾಡಿ ಶ್ರೀನಿವಾಸ ಶೆಟ್ಟಿ ಭೇಟಿಯಾದ ಕಾಂಗ್ರೇಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ : ರಾಜಕೀಯದಲ್ಲಿ ಸಂಚಲನ ಮೂಡಿಸಿದ ಭೇಟಿ

ಕುಂದಾಪುರ : ಸದ್ಯ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಇದೊಂದು ಪೋಟೋ ಸಂಚಲನ ಮೂಡಿಸಿದೆ.

ಕಾಂಗ್ರೆಸ್‌ನ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಗುರುವಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಸಹೋದರ ಸಂಬಂಧಿಗಳಾದ ಹಾಲಾಡಿ ಹಾಗೂ ಜಯಪ್ರಕಾಶ್ ಹೆಗ್ಡೆ ಒಂದು ಬಾರಿ ಚುನಾವಣೆಯಲ್ಲಿ ಮುಖಾಮುಖಿಯಾಗಿದ್ದರು. ಇದೀಗ ಕಾಂಗ್ರೇಸ್ ನಿಂದ ಜಯಪ್ರಕಾಶ್ ಹೆಗ್ಡೆ ಅವರಿಗೆ ಲೋಕಸಭೆ ಟಿಕೆಟ್ ಸಿಕ್ಕಿದ್ದು, ಈ ಹಿನ್ನಲೆ ಹಾಲಾಡಿಯವರ ಮನೆಯಲ್ಲಿ ಭೇಟಿ ಮಾಡಿದ ಜಯಪ್ರಕಾಶ್ ಹೆಗ್ಡೆ, ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಆರೋಗ್ಯ ವಿಚಾರಿಸಿ ಈರ್ವರು ನಾಯಕರು ಕೆಲ ಹೊತ್ತು ಜಿಲ್ಲೆಯ ಸಮಸ್ಯೆಗಳ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದರು ಎನ್ನಲಾಗಿದೆ.

ಕೆ. ಜಯಪ್ರಕಾಶ್ ಹೆಗ್ಡೆಯವರು ಬಿಜೆಪಿ ನಾಯಕ, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬ್ರಹ್ಮಾವರ ವಿಧಾನಸಭಾ ಕ್ಷೇತ್ರ ಪುನರ್‌ವಿಂಗಣೆಯ ಬಳಿಕ ಕುಂದಾಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಕೆ. ಜಯಪ್ರಕಾಶ್ ಹೆಗ್ಡೆಯವರು ಅಂದಿನ ಬಿಜೆಪಿ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಪರಾಭವಗೊಂಡಿದ್ದರು. ಸಹೋದರ ಸಂಬಂಧಿಗಳಾದರೂ ರಾಜಕೀಯವಾಗಿ ಎದುರಾಳಿಗಳಾಗಿದ್ದ ಇವರಿಬ್ಬರ ಸೌಹಾರ್ದ ಭೇಟಿ ಕುಂದಾಪುರದ ರಾಜಕೀಯ ವಲಯದಲ್ಲಿ ಬಹುದೊಡ್ಡ ಬಿರುಗಾಳಿ ಎಬ್ಬಿಸಿದೆ.

Scroll to Top