ಕಾಪು ಪೊಲೀಸ್ ಠಾಣೆ ಮಹಿಳಾ ಸಿಬ್ಬಂದಿ ಜ್ಯೋತಿ ಆತ್ಮಹತ್ಯೆ ಪ್ರಕರಣ : ಪತಿ ಅರೆಸ್ಟ್

ಕಾಪು : ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಜ್ಯೋತಿ(32) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತರನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ರವಿ ಕುಮಾರ್(35) ಎಂದು ಗುರುತಿಸಲಾಗಿದೆ.

ಇವರು ಕೆಎಸ್‌ಆರ್‌ಟಿಸಿಯಲ್ಲಿ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 2017ರಲ್ಲಿ ತನ್ನದೇ ಊರಿನ ಜ್ಯೋತಿಯನ್ನು ಮದುವೆಯಾಗಿದ್ದನು. ಜ್ಯೋತಿ ಕಾಪು ಠಾಣಾ ಸಿಬ್ಬಂದಿಯಾಗಿರುವುದರಿಂದ ಇವರಿಬ್ಬರು ಠಾಣಾ ಸಮೀಪದಲ್ಲೇ ಇರುವ ಪೊಲೀಸ್ ವಸತಿಗೃಹದಲ್ಲಿ ವಾಸವಾಗಿದ್ದರು.

ಜ್ಯೋತಿ ಆತ್ಮಹತ್ಯೆ ಮಾಡಿಕೊಂಡ ರೂಮಿನಲ್ಲಿ ಒಂದು ಡೈರಿ ಸಿಕ್ಕಿದ್ದು, ಅದರಲ್ಲಿ ತನ್ನ ಸಾವಿಗೆ ತನ್ನ ಗಂಡನ ಅನುಮಾನವೇ ಕಾರಣ ಎಂದು ಬರೆದಿದ್ದಾರೆ.  ಈ ಹಿನ್ನಲೆ ಆಕೆಯ ತಾಯಿ ದೇವಮ್ಮ ವಿಟ್ಲಾಪುರ ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಕಲಂ 306, 498(ಎ) ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ಪತಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

You cannot copy content from Baravanige News

Scroll to Top