Sunday, September 8, 2024
Homeಸುದ್ದಿರಾಜ್ಯಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್ ರಕ್ಷಣೆ, ಫಲಿಸಿದ ಪ್ರಾರ್ಥನೆ

ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್ ರಕ್ಷಣೆ, ಫಲಿಸಿದ ಪ್ರಾರ್ಥನೆ

ವಿಜಯಪುರ : ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಸಾತ್ವಿಕ್ನನ್ನು ಕೊನೆಗೂ ರಕ್ಷಣೆ ಮಾಡಲಾಗಿದೆ.

ಸತತ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆಯ ಬಳಿಕ ಮಗುವನ್ನು ರಕ್ಷಣೆ ಮಾಡಲಾಗಿದೆ.

ಮಗುವಿನ ಪೋಷಕರಾದ ಸತೀಶ್ ಮತ್ತು ಪೂಜಾ ದಂಪತಿ ಹಾಗೂ ಸ್ಥಳೀಯರು ಕೊನೆಗೂ ನಿಟ್ಟುಸಿರು ಬಿಡುವಂತಾಗಿದೆ. ಸಾತ್ವಿಕ್ನನ್ನು ಜೀವಂತವಾಗಿ ಹೊರ ತೆಗೆಯುವಲ್ಲಿ ರಕ್ಷಣಾ ಸಿಬ್ಬಂದಿ ಕೊನೆಗೂ ಯಶಸ್ವಿಯಾಗಿದ್ದಾರೆ. ನಿರಂತರ ಕಾರ್ಯಾಚರಣೆ ನಡೆಸಿ ಮಗು ಸಾತ್ವಿಕ್ನನ್ನು ರಕ್ಷಿಸಿದ ಸಿಬ್ಬಂದಿಯ ಬಗ್ಗೆ ಇದೀಗ ಎಲ್ಲೆಡೆ ಮೆಚ್ಚುಗೆಯ ಮಹಾಪೂರವೇ ವ್ಯಕ್ತವಾಗುತ್ತಿದೆ. ಸಾತ್ವಿಕ್ನನ್ನು ತಕ್ಷಣವೇ ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಎನ್ಡಿಆರ್ಎಫ್ ತಂಡ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಇವರಿಗೆ ಬೆಳಗಾವಿಯಿಂದ ಬಂದಿದ್ದ ಶ್ರೀಶೈಲ್ ಚೌಗಲಾ ನೇತೃತ್ವದ ರಾಜ್ಯ ವಿಪತ್ತು ನಿರ್ವಹಣಾ ತಂಡ (ಎಸ್ಡಿಆರ್ಎಫ್), ಸ್ಥಳೀಯ ಪೊಲೀಸರು, ಅಗ್ನಿ ಶಾಮಕ ದಳ ಸಿಬ್ಬಂದಿ ಸಾಥ್ ನೀಡಿದರು.

ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತ ತಲುಪುತ್ತಿದ್ದಂತೆಯೇ ಆಂಬ್ಯುಲೆನ್ಸ್ ಸಿದ್ಧವಾಗಿ ಇರಿಸಲಾಗಿತ್ತು. ಮಗುವನ್ನು ಕೊಳವೆ ಬಾವಿಯಿಂದ ಹೊರ ತೆಗೆಯುತ್ತಿದ್ದಂತೆಯೇ ಪ್ರಾಥಮಿಕ ಚಿಕಿತ್ಸೆ ನೀಡಿ ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಅಂತಿಮ ಹಂತದ ಕಾರ್ಯಾಚರಣೆ ವೇಳೆ ಮಗು ಅಳುತ್ತಿರುವ ಶಬ್ದ ರಕ್ಷಣಾ ಸಿಬ್ಬಂದಿಗೆ ಕೇಳಿಸುತ್ತಿತ್ತು. ಯಂತ್ರಗಳ ಸದ್ದು ಹೆಚ್ಚಾದಂತೆ ಮಗು ಅಳುತ್ತಿರುವುದೂ ಹೆಚ್ಚಾಗಿತ್ತು., ಮಗು ಚೀರಾಡುತ್ತಿತ್ತು ಎಂದು ಸಿಬ್ಬಂದಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಸ್ಥಳಕ್ಕೆ ಬಂದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದರು. ರಕ್ಷಣೆಗೆ ಎಲ್ಲ ರೀತಿಯ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News