5, 8, 9, 11ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತೆ ಟೆನ್ಷನ್‌! ಸುಪ್ರೀಂಕೋರ್ಟ್‌ ಮಹತ್ವದ ಸೂಚನೆ

ನವದೆಹಲಿ : 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಮತ್ತೆ ಬ್ರೇಕ್ ಬಿದ್ದಿದೆ. ಬೋರ್ಡ್‌ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿದೆ.

ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ಮುಗಿದಿದ್ದು, ಇಂದು ಫಲಿತಾಂಶ ಪ್ರಕಟವಾಗ ಬೇಕಿತ್ತು. ಫಲಿತಾಂಶ ಹೊರ ಬೀಳುವುದಕ್ಕೆ ಮುಂಚೆಯೇ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ. ಸದ್ಯ ಯಾವುದೇ ಶಾಲೆಗಳು ಸಹ ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದವರೆಗೆ ಕಾಯುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಲಾಗಿದೆ.

ಜಸ್ಟೀಸ್ ತ್ರಿವೇದಿ ಮತ್ತು ಪಂಕಜ್ ಮಿತ್ತಲ್ ನೇತೃತ್ವದ ಪೀಠದಿಂದ ಈ ಮಹತ್ವದ ಆದೇಶ ನೀಡಲಾಗಿದೆ. ಖಾಸಗಿ ಶಾಲಾ ಒಕ್ಕೂಟಗಳು ಈ ತರಗತಿಗಳಿಗೆ ಬೋರ್ಡ್ ಪರೀಕ್ಷೆ ಬೇಡ ಎಂದಿತ್ತು. ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಖಾಸಗಿ ಶಾಲೆಗಳಿಗೆ ಹೈಕೋರ್ಟ್‌ನಲ್ಲೇ ಬಗೆಹರಿಸಿಕೊಳ್ಳಲು ಸುಪ್ರೀಂಕೋರ್ಟ್‌ ಸೂಚನೆ ನೀಡಿತ್ತು. ಇದೀಗ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ಕಳೆದ ಮಾರ್ಚ್ ತಿಂಗಳಲ್ಲಿ 5,8,9 ನೇ ತರಗತಿಗೆ ರಾಜ್ಯ ಶಿಕ್ಷಣ ಇಲಾಖೆ ‌ಬೋರ್ಡ್ ಪರೀಕ್ಷೆ ನಡೆಸಿತ್ತು. ಬೋರ್ಡ್ ಪರೀಕ್ಷೆ ನಡೆಸಿದಂತೆ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಕೋರ್ಟ್ ‌ಮೆಟ್ಟಿಲೇರಿತ್ತು. ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟ ಮೌಲ್ಯ ಮಾಪನ ದೋಷದ ಆರೋಪ ಮಾಡಿತ್ತು. ಇಂದು ಪ್ರಕಟವಾಗಬೇಕಿದ್ದ ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

You cannot copy content from Baravanige News

Scroll to Top