ಉಡುಪಿ : ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಮಲ್ಪೆ ಬೀಚ್‌ನಲ್ಲಿ ನಡೆದಿದೆ.
ಬೆಂಗಳೂರು ಮೂಲದ ನಾಗೇಂದ್ರ (21) ಮೃತ ಯುವಕ.
ನಾಗೇಂದ್ರ ಅವರು ತನ್ನ ಐವರು ಸ್ನೇಹಿತರೊಂದಿಗೆ ಮಲ್ಪೆ ಬೀಚ್‌ಗೆ ಬಂದಿದ್ದರು ಎನ್ನಲಾಗಿದೆ. ಇನ್ನು ಘಟನೆಯ ಮಾಹಿತಿ ಪಡೆದ ಸ್ಥಳೀಯ ಜೀವ ರಕ್ಷಕರು ಮತ್ತು ಈಶ್ವರ ಮಲ್ಪೆ ಕೂಡಲೇ ಸ್ಥಳಕ್ಕೆ ಆಗಮಿಸಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಆತನನ್ನು ರವಾನಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ನಾಗೇಂದ್ರ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಉಡುಪಿ : ಪ್ರವಾಸಕ್ಕೆಂದು ಬಂದಿದ್ದ ಯುವಕ ಸಮುದ್ರದಲ್ಲಿ ಮುಳುಗಿ ಮೃತ್ಯು
![](https://www.baravanige.com/wp-content/uploads/2024/04/pro-6.webp)