ಏಪ್ರಿಲ್ 29ರೊಳಗೆ ಬರ ಪರಿಹಾರ ಬಿಡುಗಡೆ ಮಾಡಲು ಒಪ್ಪಿದ ಕೇಂದ್ರ

ನವದೆಹಲಿ : ಕರ್ನಾಟಕದಲ್ಲಿ ಬರ ನಿರ್ವಹಣೆಗಾಗಿ ಏ. 29ರ ಒಳಗೆ ಬರ ಪರಿಹಾರ ನಿಧಿ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿದಿದೆ.



ರಾಜ್ಯಕ್ಕೆ ಬರ ಪರಿಹಾರ ನಿಧಿ ಬಂದಿಲ್ಲ, ಹೀಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಸುಪ್ರೀಂಕೋರ್ಟ್ ನ ನ್ಯಾ.ಬಿ.ಆರ್.ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ರಾಜ್ಯ ಸರ್ಕಾರದ ಅರ್ಜಿ ವಿಚಾರಣೆ ನಡೆಸಿತ್ತು.

ಬರ ಪರಿಹಾರ ಸಂಬಂಧ ಚುನಾವಣಾ ಆಯೋಗದ ಅನುಮತಿ ಕೇಳಿದ್ದೇವೆ. ಕೆಲವೇ ದಿನಗಳಲ್ಲಿ ಸಮಸ್ಯೆ ಬಗೆಹರಿಯಬಹುದು. ಸೋಮವಾರದೊಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ಪರ ವಕೀಲರು ನ್ಯಾಯ ಪೀಠಕ್ಕೆ ತಿಳಿಸಿದ್ದಾರೆ. ವಾದ-ಪ್ರತಿವಾದವನ್ನು ಆಲಿಸಿದ ದ್ವಿಸದಸ್ಯ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ.

You cannot copy content from Baravanige News

Scroll to Top