ಪ್ರತಿಯೊಬ್ಬರಿಗೂ ಸರ್ಕಾರಿ ಉದ್ಯೋಗ ಸಿಗಬೇಕು ಎನ್ನುವುದಿರುತ್ತದೆ. ಹೀಗಾಗಿ ಸರ್ಕಾರಿ ಉದ್ಯೋಗಕ್ಕಾಗಿ ಕಸರತ್ತುಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಇದೀಗ ಹತ್ತನೇ ತರಗತಿ ಪಾಸಾದವರಿಗೆ ಕೇಂದ್ರ ಸರಕಾರಿ ಉದ್ಯೋಗ ಪಡೆಯುವ ಅವಕಾಶವಿದೆ.
ಅಂಚೆ ಕಚೇರಿಯಲ್ಲಿ ಖಾಲಿಯಿರುವ ಸ್ಟಾಫ್ ಕಾರ್ ಡ್ರೈವರ್ (ಆರ್ಡಿನರಿ ಗ್ರೇಡ್), ಜನರಲ್ ಸೆಂಟ್ರಲ್ ಸರ್ವಿಸ್ Gr.-C, ನಾನ್-ಗೆಜೆಟೆಡ್, ನಾನ್ ಮಿನಿಸ್ಟ್ರೀಯಲ್ ಹುದ್ದೆಗಳಿಗೆ ಕರ್ನಾಟಕ ವೃತ್ತದಲ್ಲಿ ವೇತನ ಶ್ರೇಣಿಯಲ್ಲಿ ಅರ್ಹ ಭಾರತೀಯ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
19 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿಯಿದ್ದು, ಅರ್ಜಿ ಸಲ್ಲಿಕೆಯು ಏಪ್ರಿಲ್ 16, 2024 ರಂದು ಆರಂಭವಾಗಿದೆ. ಮೇ 31, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಈ ಕೂಡಲೇ ಆಫ್ಲೈನ್ ಅಥವಾ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಯ ವೇಳೆ ಸರಕಾರದಿಂದ ಮಾನ್ಯತೆ ಪಡೆದಿರುವ ಶಿಕ್ಷಣ ಇಲಾಖೆ ಅಥವಾ ಮಂಡಳಿಗಳಿಂದ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 56 ವರ್ಷವನ್ನು ಮೀರಿರಬಾರದು. ಡ್ರೈವಿಂಗ್ ಲೈಸೆನ್ಸ್, ಸ್ಕಿಲ್ ಟೆಸ್ಟ್, ಸಂದರ್ಶನಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಿಹಾರದ ಪಾಟ್ನಾದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಫ್ ಲೈನ್ ಮೂಲಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ, ಬಿಹಾರ ಸರ್ಕಲ್ ಪಾಟ್ನಾ-800001 ಈ ವಿಳಾಸಕ್ಕೆ ಕಳುಹಿಸಬೇಕು