ನಮ್ಮ ಬಳಿಯೂ ಕೆಲವು ವೀಡಿಯೋ ಇವೆ : ಹೊಸ ಬಾಂಬ್ ಹಾಕಿದ ಹೆಚ್.ಡಿ ಕುಮಾರಸ್ವಾಮಿ

ಹುಬ್ಬಳ್ಳಿ : ನಮ್ಮ ಬಳಿಯೂ ಕೆಲ ವೀಡಿಯೋ ಇವೆ. ಎಲ್ಲ ಆಯಾಮಗಳಲ್ಲಿ ತನಿಖೆಯಾಗಬೇಕು ಎಂದು ಜೆಡಿಎಸ್ ಅಧ್ಯಕ್ಷ ಎಚ್.ಡಿ ಕುಮಾರಸ್ವಾಮಿಯವರು ಹೇಳಿದ್ದಾರೆ.

ಹಾಸನ ಅಶ್ಲೀಲ ವಿಡಿಯೋ ಪ್ರಕರಣ ಮತ್ತು ಪೆನ್ಡ್ರೈವ್ ಹಂಚಿಕೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇದರ ಹಿಂದೆ ಮಹಾನ್ ನಾಯಕರ ಕೈವಾಡವಿದೆ. 2012 ರಲ್ಲಿ ನಡೆದ ಪ್ರಕರಣಕ್ಕೆ ಜೀವ ಕೊಟ್ಟವರು ಮಹಾನ್ ನಾಯಕ. ಮಹಿಳೆಯರ ಬಗ್ಗೆ ಮಾತಾಡೋ ಮಹಾನ್ ನಾಯಕನಿಂದ ಮಾನ ಹರಾಜು ಆಗಿದೆ ಎಂದು ಹೇಳಿದ್ದಾರೆ.

ನಾವು ಯಾರನ್ನೂ ರಕ್ಷಿಸೋ ಪ್ರಶ್ನೆಯೇ ಇಲ್ಲ

ಜೆಡಿಎಸ್ ಶಾಸಕರ ಅಸಮಾಧಾನ ವಿಚಾರವಾಗಿ ಮಾತನಾಡಿದ ಹೆಚ್ಡಿಕೆ ಪಕ್ಷದ ಇಮೇಜ್‌ಗೆ ಧಕ್ಕೆಯಾಗಬಾರದೆಂಬ ಕಾಳಜಿ ಇದೆ. ಅದೇ ಕಾಳಜಿ ನಮ್ಮದೂ ಇದೆ. ಇಲ್ಲಿ ಯಾರನ್ನೂ ಕ್ಷಮಿಸೋ ಪ್ರಶ್ನೆಯೇ ಇಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು. ನಾವು ಯಾರನ್ನೂ ರಕ್ಷಿಸೋ ಪ್ರಶ್ನೆಯೇ ಇಲ್ಲ. ಸರಕಾರ ತನ್ನದೇ ಆದ ತನಿಖೆ ಮಾಡಲಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.

ನಾನು ಇದನ್ನು ಇಷ್ಟಕ್ಕೇ ಬಿಡೋದಿಲ್ಲ

ಕೋರ್ ಕಮಿಟಿ ಸಭೆಗೂ ಮುನ್ನ ಮಾಧ್ಯಮಕ್ಕೆ ಪ್ರತಿಕ್ರಿಯ ಹೆಚ್ಡಿಕೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಏನು ಹೇಳಿದ್ದಾರೆ..!? ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ರಾಜಿ ಇಲ್ಲ ಅಂದಿದ್ದಾರೆ. ಹೊರತು ಪ್ರಜ್ವಲ್ ಪ್ರಕರಣ ಪ್ರಸ್ತಾಪಿಸಿಲ್ಲ. ಕಾಂಗ್ರೆಸ್ ಪುಡಾರಿಗಳು ನಮ್ಮ ಮನೆ ಮುಂದೇಕೆ ಪ್ರತಿಭಟನೆ ಮಾಡಬೇಕು..!? ಮಹಾನ್ ನಾಯಕರ ಮನೆ ಮುಂದೆ ಪ್ರತಿಭಟಿಸಲಿ. ನಾನು ಇದನ್ನು ಇಷ್ಟಕ್ಕೇ ಬಿಡೋದಿಲ್ಲ ಎಂದು ಹೆಚ್ಡಿಕೆ ಗರಂ ಆಗಿ ಮಾತನಾಡಿದ್ದಾರೆ.

You cannot copy content from Baravanige News

Scroll to Top