ನವದೆಹಲಿ : 18ನೇ ಲೋಕಸಭಾ ಚುನಾವಣೆಯ ಭರಾಟೆಯ ಸಮಯದಲ್ಲೇ ಇಂಧನ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್.ಪಿ.ಜಿ ಸಿಲಿಂಡರ್ ಗಳ ಬೆಲೆಯನ್ನು ಮತ್ತೆ ಇಳಿಕೆ ಮಾಡಿದ್ದು, ಮೇ 1ರಿಂದಲೇ ಹೊಸ ದರ ಅನ್ವಯವಾಗಲಿದೆ ಎಂದು ತಿಳಿಸಿದೆ.
ವಾಣಿಜ್ಯ ಎಲ್.ಪಿ.ಜಿ ಸಿಲಿಂಡರ್ ಬೆಲೆಯಲ್ಲಿ 19 ರೂಪಾಯಿ ಇಳಿಕೆ ಮಾಡಿರುವುದಾಗಿ ತಿಳಿಸಿದೆ.
19 ಕೆಜಿಯ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆ ಇದೀಗ ದೆಹಲಿಯಲ್ಲಿ 1745.50 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ತಿಂಗಳು 19ಕೆಜಿಯ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆ 30.50 ರೂಪಾಯಿ ಇಳಿಕೆಯಾಗಿತ್ತು. ಉದ್ಯಾನನಗರಿ ಬೆಂಗಳೂರಿನಲ್ಲಿ 19ಕೆಜಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆ 1,799 ರೂಪಾಯಿಯಾಗಿದೆ.