ಮಂಗಳೂರು : ಬೀಬಿ ಅಲಾಬಿ ರಸ್ತೆ ಬಳಿಯ ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್‌ನಲ್ಲಿ ವಾಸವಿದ್ದ 2ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
ಮೃತರನ್ನು ನಿತೇಶ್ ರಾವ್ ಎಂದು ಗುರುತಿಸಲಾಗಿದೆ.
ಉಡುಪಿ ಜಿಲ್ಲೆಯವರಾದ ನಿತೇಶ್ ಕಳೆದ ಎರಡು ವರ್ಷಗಳಿಂದ ಮಂಗಳೂರಿನಲ್ಲಿ ಓದುತ್ತಿದ್ದರು.
ಮೃತರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.
ನಿತೇಶ್ ತಾಯಿ ನೀಡಿದ ದೂರಿನ ಮೇರೆಗೆ ಉತ್ತರ ಪಿಎಸ್ ನಲ್ಲಿ ಯುಡಿಆರ್ ನಂ 18/2024 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆಗಳು ನಡೆಯುತ್ತಿದೆ.