ಉತ್ತರ ಕನ್ನಡ : ಕುಮಟಾ ತಾಲೂಕಿನ ತದಡಿ ಗ್ರಾಮದ ಸಮೀಪ ಸಮುದ್ರದ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಮಗುಚಿದ್ದು, 40 ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಅಳಿವೆ ಸಂಗಮ ಸ್ಥಳದಿಂದ ತುಸು ದೂರದಲ್ಲಿ ಈ ಘಟನೆ ನಡೆದಿದೆ.
ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ರಕ್ಷಣಾ ತಂಡದಿಂದ ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ.
ಮೂಡಂಗಿಯ ಗಣೇಶ, ರಮೇಶ ಎಂಬುವವರಿಗೆ ಸೇರಿದ್ದ ಪ್ರವಾಸಿ ಬೋಟ್ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಂಡಿದ್ದರಿಂದ ಬೋಟ್ ಮಗುಚಿದೆ. ಸಕಾಲಕ್ಕೆ ಕರಾವಳಿ ಕಾವಲು ಪಡೆ ಆಗಮಿಸಿ ರಕ್ಷಣೆ ಮಾಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ. ಈ ಪ್ರವಾಸಿ ಬೋಟ್ ಗಣೇಶ, ರಮೇಶ ಎಂಬುವರಿಗೆ ಸೇರಿದ್ದು, ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಪ್ರಯಾಣಿಸಿದ್ದಕ್ಕೆ ಈ ಅವಘಡ ಸಂಭವಿಸಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.