ಬೆಂಗಳೂರು : 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಬಿಡುಗಡೆ ಮಾಡಿದೆ.
2023-24ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 2 ಅನ್ನು ಏಪ್ರಿಲ್ 29ರಿಂದ ಮೇ 16, 2024 ರವರೆಗೆ ನಡೆಸಲಾಗಿತ್ತು. ಒಟ್ಟು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಅದರಲ್ಲಿ 1,48 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇಂದು ಬಿಡುಗಡೆಯಾದ ದ್ವಿತೀಯ ಪಿಯುಸಿ ಪರೀಕ್ಷೆ 2ರಲ್ಲಿ 52,505 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇಕಡಾವಾರು ಫಲಿತಾಂಶ 35.25% ದಾಖಲಾಗಿದೆ.
ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ 2 ಪರೀಕ್ಷೆ ನಡೆಸಲಾಗಿತ್ತು. ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯಲ್ಲಿ 1.48 ಲಕ್ಷ ವಿದ್ಯಾರ್ಥಿಗಳ ಪೈಕಿ ಕೇವಲ 52,505 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಅದರಲ್ಲೂ 26,496 ಮಂದಿ ಬಾಲಕರು, 26,009 ಮಂದಿ ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಆದರೆ ಈ ಬಾರಿ ದ್ವಿತೀಯ ಪಿಯುಸಿ 2 ಫಲಿತಾಂಶದಲ್ಲಿ ಭಾರೀ ಕುಸಿತ ಕಂಡಿದೆ.