ಡ್ರೋನ್ ಫಿಲ್ಮ್ ಮೇಕಿಂಗ್ ನಲ್ಲಿ ಚಿನ್ನದ ಪದಕ ಗೆದ್ದ ಉಡುಪಿಯ ರೋಹನ್ ಕೋಟ್ಯಾನ್

ಉಡುಪಿ : ಕೌಶಲ್ಯಾಭಿವೃದ್ದಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯಯು ಮೇ 15 ರಿಂದ 19 ರ ವರೆಗೆ ದೆಹಲಿಯ ದ್ವಾರಕಾದಲ್ಲಿ ಆಯೋಜಿಸಿದ ರಾಷ್ಟ್ರದ ಅತೀ ದೊಡ್ಡ ಕೌಶಲ್ಯ ಸ್ಪರ್ಧೆಯಾದ ಭಾರತದ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದಿಂದ ಪ್ರತಿನಿಧಿಸಿದ್ದ ಉಡುಪಿಯ ರೋಹನ್ ಕೋಟ್ಯಾನ್ ಅವರು ಡ್ರೋನ್ ಫಿಲ್ಮ್ ಮೇಕಿಂಗ್ ನಲ್ಲಿ ಚಿನ್ನದ ಪದಕವನ್ನು ಗಳಿಸಿದ್ದು, ಸೆಪ್ಟೆಂಬರ್- 2024 ರಲ್ಲಿ ಫ್ರಾನ್ಸ್ನ ಲಿಯೋನಲ್ಲಿ ನಡೆಯುವ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿಯ ನಿವಾಸಿಯಾದ ಶಶಿಧರ ಕೋಟ್ಯಾನ್ ಮತ್ತು ವಸುಧಾ ಕೋಟ್ಯಾನ್ ದಂಪತಿಗಳ ಮಗನಾದ ರೋಹನ್ ಕೋಟ್ಯಾನ್,

ಪ್ರಸ್ತುತ ಮಣಿಪಾಲ್ ಇನ್ಸಿಟ್ಯೂಷನ್ ಆಫ್ ಕಮ್ಯುನಿಕೇಷನ್ ಇಲ್ಲಿ ಬಿ.ಎ ಇನ್ ಮಾಸ್ ಮೀಡಿಯಾ ಅಂಡ್ ಕಮ್ಯುನಿಕೇಷನ್ ವ್ಯಾಸಾಂಗ ಮಾಡುತ್ತಿದ್ದು, ಜಿಲ್ಲೆಗೆ ಹೆಮ್ಮೆ ತಂದ ಇವರಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಜಿಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಪ್ರದೀಪ್ ಡಿಸೋಜಾ ಶುಭ ಹಾರೈಸಿದ್ದಾರೆ.

You cannot copy content from Baravanige News

Scroll to Top