ಮಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ನಡುರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದ ಭಾವಚಿತ್ರ ಎಲ್ಲಡೆ ಹರದಾಡಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ನಮಾಜ್ ಮಾಡಿದ್ದಾರೆ. ಕಳೆದ ಶುಕ್ರವಾರ ಘಟನೆ ನಡೆದಿದ್ದು, ನಮಾಜ್ ಮಾಡಿದ ವೀಡಿಯೋ ಎಲ್ಲೆಡೆ ಹರಿದಾಡುತ್ತಿದೆ.
ಕಂಕನಾಡಿಯಲ್ಲಿನ ಮಸೀದಿ ಮುಂದೆ ಇರುವ ರಸ್ತೆಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ನಡು ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದರಿಂದ ವಾಹನ ಸವಾರರು ಯೂಟರ್ನ್ ತೆಗೆದುಕೊಂಡು ಹೋಗಿದ್ದಾರೆ. ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮಾಜ್ ಮಾಡಿದ್ದನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದ್ದು, ಅಸಮಧಾನ ವ್ಯಕ್ತವಾಗಿದೆ.
ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪರ-ವಿರೋಧದ ಚರ್ಚೆ ನಡೆಯುತ್ತಿದೆ.