ನಾಪತ್ತೆಯಾಗಿದ್ದ ಶಿಕ್ಷಕಿ ಅನ್ಯಕೋಮಿನ ಯುವಕನ ಜೊತೆ ಪತ್ತೆ ; ರೆಜಿಸ್ಟರ್ ವಿವಾಹ : ಲವ್ ಜಿಹಾದ್ ಆರೋಪ

ಕಾಸರಗೋಡು : ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾಸರಗೋಡು ಶಾಲೆಯ ಶಿಕ್ಷಕಿಯೊಬ್ಬರು ಅನ್ಯಕೋಮಿನ ಯುವಕನ ಜೊತೆ ಪತ್ತೆಯಾಗಿದ್ದು, ಲವ್ ಜಿಹಾದ್ ಆರೋಪ ಕೇಳಿಬಂದಿದೆ.

ಮೇ.23 ರಂದು ಮನೆಯಿಂದ ಹೊರಟಿದ್ದ ಶಿಕ್ಷಕಿ ಯುವತಿ ನಾಪತ್ತೆಯಾಗಿದ್ದರು. ಈ ಬಗ್ಗೆ ಬದಿಯಡ್ಕ ಠಾಣೆಯಲ್ಲಿ ಯುವತಿಯ ತಂದೆ ದೂರು ದಾಖಲಿಸಿದ್ದರು.

ಇದೀಗ ಯುವತಿ ಅನ್ಯಕೋಮಿನ ಯುವಕನ ಜೊತೆ ಪತ್ತೆಯಾಗಿದ್ದು, ಇಬ್ಬರೂ ವಿವಾಹವಾಗಿದ್ದಾರೆ ಎನ್ನಲಾಗುತ್ತಿದೆ.

ಬದಿಯಡ್ಕ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಬ್ಬರ ಭಾವಚಿತ್ರವಿರುವ ನೋಟಿಸ್ ಪತ್ತೆಯಾಗಿದ್ದು, ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹವಾಗಿ ಮೇ.27 ರಂದು ಬದಿಯಡ್ಕ ಪೊಲೀಸ್ ಠಾಣೆಗೆ ಬಂದು ಜೋಡಿ ಹಾಜರಾಗಿದೆ.

ಇದೊಂದು ಲವ್ ಜಿಹಾದ್ ಪ್ರಕರಣವಾಗಿದ್ದು, ಮಾಹಿತಿ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಲವ್ ಜಿಹಾದ್ ಗೆ ಕೇರಳದ ಮುಸ್ಲಿಂ ಲೀಗ್ ನೇತಾರನೊಬ್ಬನ ತಂತ್ರ ಅಡಗಿದೆ ಎಂದು ಹಿಂದೂ ಪರ ಸಂಘಟನೆಗಳು ಆರೋಪಿಸುತ್ತಿವೆ.

Scroll to Top