ಕಾಂಗ್ರೆಸ್ ಅಭ್ಯರ್ಥಿಯ ಕರಪತ್ರದಲ್ಲಿ ಬಿಜೆಪಿ ನಾಯಕನ ಫೋಟೋ!

ಉಡುಪಿ : ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಕರಪತ್ರದಲ್ಲಿ ಬಿಜೆಪಿ ನಾಯಕನ ಫೋಟೋ ಅಳವಡಿಸುವ ಮೂಲಕ ಕಾಂಗ್ರೆಸ್ ಎಡವಟ್ಟು ಮಾಡಿಕೊಂಡಿದೆ. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ ಫೋಟೋ ಬಳಕೆ ಮಾಡಲಾಗಿದೆ.

ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಡಾ. ಕೆ.ಕೆ ಮಂಜುನಾಥ ಕುಮಾರ್ ಅವರ ಪ್ರಚಾರದ ಕರಪತ್ರದಲ್ಲಿ ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಶೆಟ್ಟಿ ಫೋಟೋ ಮಿಸ್ ಆಗಿ ಬಂದಿದೆ.


ಉಡುಪಿಯ ಎಲ್ಲಾ ಕಾಂಗ್ರೆಸ್ ನಾಯಕರಿರುವ ಪುಟದಲ್ಲಿ ಈ ಎಡವಟ್ಟು ಕಂಡು ಬಂದಿದೆ. ಬಿಜೆಪಿಯ ಉದಯ ಕುಮಾರ್ ಶೆಟ್ಟಿ ಫೋಟೋ ಬಳಕೆ ಮಾಡುವ ಮೂಲಕ ಕಾಂಗ್ರೆಸ್ ಪ್ರಚಾರ ಕರಪತ್ರ ರಚನಾ ಸಮಿತಿ ಎಡವಟ್ಟು ಮಾಡಿಕೊಂಡಿರುವುದು ಇದೀಗ ವ್ಯಾಪಕ ಟೀಕೆಗೆ ಕಾರಣವಾಗಿದೆ.

You cannot copy content from Baravanige News

Scroll to Top