ನಟ ʼಪ್ರಜ್ವಲ್‌ ದೇವರಾಜ್‌ ಇನ್ನಿಲ್ಲʼ ಎಂಬ ಪೋಸ್ಟರ್‌ ವೈರಲ್:‌ ನಿಜಕ್ಕೂ ಆಗಿದ್ದೇನು ಗೊತ್ತಾ..?

ಬೆಂಗಳೂರು, ಮೇ 30: ನಟ ಪ್ರಜ್ವಲ್​ ದೇವರಾಜ್​ ಅವರು ಆರೋಗ್ಯವಾಗಿದ್ದಾರೆ. ಆದರೆ ಕೆಲವು ಕಿಡಿಗೇಡಿಗಳು ಸೋಶಿಯಲ್​ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ನಟನ ಫೋಟೋವನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ಸುದ್ದಿ ಹರಡಲಾಗಿದೆ.

ಪ್ರಜ್ವಲ್​ ದೇವರಾಜ್​ ಇನ್ನಿಲ್ಲ. ಓಂ ಶಾಂತಿ ಎಂಬ ಕ್ಯಾಪ್ಷನ್​ನೊಂದಿಗೆ ಪ್ರಜ್ವಲ್​ ದೇವರಾಜ್​ ಅವರ ಫೋಟೋವನ್ನು ವೈರಲ್​ ಮಾಡಲಾಗಿದೆ. ಇದು ಅವರ ಕುಟುಂಬದವರ ಗಮನಕ್ಕೂ ಬಂದಿದೆ. ಸುಳ್ಳು ಸುದ್ದಿಯ ಬಗ್ಗೆ ಪ್ರಜ್ವಲ್​ ದೇವರಾಜ್​ ಕುಟುಂಬದವರು ಬೇಸರ ವ್ಯಕ್ತಪಡಿಸಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಪ್ರಜ್ವಲ್ ಅವರ ಪೋಟೋಗಳನ್ನು ದುರ್ಬಳಕೆ ಮಾಡಲಾಗಿದೆ. ಆರೋಗ್ಯವಂತ ನಟನ ಬಗ್ಗೆ ಈ ರೀತಿಯ ವದಂತಿಗಳು ಸರಿಯಲ್ಲ. ಇದರಿಂದ ಕುಟುಂಬಸ್ಥರು ಹಾಗೂ ಅಭಿಮಾನಿಗಳಲ್ಲಿ ಆತಂಕ ಉಂಟಾಗುತ್ತದೆ ಎಂದು ಪ್ರಜ್ವಲ್​ ಅವರ ಆಪ್ತರು ಹೇಳಿದ್ದಾರೆ.

ಕಿಡಿಗೇಡಿಗಳ ಈ ಕೃತ್ಯದ ವಿರುದ್ಧ ಕುಟುಂಬದವರು ಅಸಮಾಧಾನ ವ್ಯಕ್ತಪಡಿಸಿದ್ದು, ಅಲ್ಲದೇ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ದೂರು ನೀಡಲು ಕುಟುಂಬದವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.

Baravanige News

Adblock Detected!

Our website is made possible by displaying online advertisements to our visitors. Please consider supporting us by whitelisting our website.

You cannot copy content from Baravanige News

Scroll to Top