ಉಡುಪಿ : ಬಿಜೆಪಿ ಅಧಿಕೃತ ಅಭ್ಯರ್ಥಿ ವಿರುದ್ಧ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡಿದ ನಾಲ್ವರು ಪದಾಧಿಕಾರಿಗಳನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಟಾಕೂರ್, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ರೋಷನ್ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜುನೈದ್ ಎನ್ನಲಾಗಿದೆ.
ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ‘ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ನಾಲ್ವರು ಪದಾಧಿಕಾರಿಗಳಿಗೆ ನೋಟಿಸ್ ನೀಡಲಾಗಿದ್ದು, ಕೆಲವರು ಉತ್ತರ ನೀಡಿದ್ದಾರೆ, ಆದರೆ ಉತ್ತರ ತೃಪ್ತಿಕರವಾಗಿಲ್ಲದ ಕಾರಣ ಅವರನ್ನು ಆರು ವರ್ಷ ಪಕ್ಷದಿಂದ ಹೊರಹಾಕಿದ್ದೇವೆ ಎಂದರು.
ಉಚ್ಛಾಟಿತ ಪದಾಧಿಕಾರಿಗಳು ಸ್ವತಂತ್ರ ಅಭ್ಯರ್ಥಿ ರಘುಪತಿ ಭಟ್ ಅವರನ್ನು ಬೆಂಬಲಿಸಿದ್ದರು.