ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ : ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಉಡುಪಿ : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದೇಶದಲ್ಲಿ ಭಾರಿ ಸಂಚಾಲವನ್ನೇ ಮೂಡಿಸಿತ್ತು. ಈಗ ಇದೇ ಮಾದರಿ ಎನ್ನಲಾದ ಮತ್ತೊಂದು ಘಟನೆ ಉಡುಪಿಯಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.

ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ.

ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿ ವಿರುದ್ಧ ಮೇ 18 ರಂದು ಪೋಕ್ಸೋ ಪ್ರಕರಣ ದಾಖಲಾಗಿದೆ. ದೂರು ದಾಖಲಾದ ನಂತರ ಶ್ರೇಯಸ್ ನಾಪತ್ತೆಯಾಗಿದ್ದಾನೆ .ಆರೋಪಿ ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಿ ಹುಡುಕಾಡಲಾಗುತ್ತಿದೆ.

You cannot copy content from Baravanige News

Scroll to Top