ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕೋಟ ಶ್ರೀನಿವಾಸ್‌ ಪೂಜಾರಿ

ಚಿಕ್ಕಮಗಳೂರು; ಹೈವೋಲ್ವೇಜ್ ಕ್ಷೇತ್ರ ಹಾಗೂ ಇಬ್ಬರು ಸಜ್ಜನ ರಾಜಕಾರಣಿಗಳ ನಡುವಿನ ಫೈಟ್ ಎಂದೇ ಬಿಂಬಿತವಾಗಿದ್ದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸಜ್ಜನ ರಾಜಕಾರಣಿ ಎಂದೇ ಖ್ಯಾತಿ ಪಡೆದಿರುವ ಕೋಟ ಶ್ರೀನಿವಾಸ್ ಪೂಜಾರಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಿಂದಿನ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧದ ಗೋ ಬ್ಯಾಕ್ ಅಭಿಯಾನದ ಬಳಿಕವೂ ಬಿಜೆಪಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿರೋದು ಬಿಜೆಪಿಯ ಪ್ರತಿಷ್ಠೆ ಉಳಿಯುವಂತೆ ಮಾಡಿದೆ ಕಾಂಗ್ರೇಸ್ ನ ಜಯಪ್ರಕಾಶ್ ಹೆಗ್ಡೆ ವಿರುದ್ಧ ಒಂದೂವರೆ ಲಕ್ಷ ಮತಗಳ ಅಂತರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ್ದಾರೆ.

You cannot copy content from Baravanige News

Scroll to Top