ಕಬಾಬ್ ಪ್ರಿಯರಿಗೆ ಶಾಕಿಂಗ್‌ ನ್ಯೂಸ್‌; ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ಕಾಟನ್ ಕ್ಯಾಂಡಿ ಆಯ್ತು. ಗೋಬಿ ಮಂಚೂರಿಯೂ ಆಯ್ತು. ಈಗ ರಾಜ್ಯದಲ್ಲಿ ಕಬಾಬ್ ಸರದಿ. ಚಿಕನ್, ಫಿಶ್ ಹಾಗೂ ವೆಜ್ ಕಬಾಬ್‌ಗೆ ಇನ್ಮುಂದೆ ಕಲರ್ ಬಳಕೆ ಮಾಡುವಂತಿಲ್ಲ. ಕಲರ್ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ.

ಕಬಾಬ್ ತಯಾರಿಕೆಯಲ್ಲಿ ಬಳಸುವ ಕಲರ್‌ನಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಬಾಬ್‌ಗೆ ಕಲರ್ ಬಳಕೆ ಮಾಡುವಂತಿಲ್ಲ ಎಂದು ಸರ್ಕಾರ ಆದೇಶ ನೀಡಿದೆ.

ರಾಜ್ಯದ 36 ಕಡೆಗಳಲ್ಲಿ ಕಬಾಬ್ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ನೀಡಲಾಗಿತ್ತು. ಇದ್ರಲ್ಲಿ ಯೆಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರ ಕಲರ್ ಬ್ಯಾನ್ ಮಾಡಿದೆ.

ಕಲರ್‌ ನಿಷೇಧಕ್ಕೆ ಕಾರಣವೇನು?

ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಈ ಹಿಂದೆ ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದ್ದು, ಇವುಗಳಲ್ಲಿ ಬಳಸುವ ಕೃತಕ ಬಣ್ಣಗಳಲ್ಲಿ ಹಾನಿಕಾರಕ ರಾಸಾಯನಿಕ ಇರುವುದು ಪತ್ತೆಯಾಗಿತ್ತು.

ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನ FSSAI ಸಂಗ್ರಹಿಸಿದ್ದು, ರಾಜ್ಯಾದ್ಯಂತ 170ಕ್ಕೂ ಹೆಚ್ಚು ಕಡೆ ಗೋಬಿ ಮಾದರಿ ಟೆಸ್ಟ್​​ ಮಾಡಲಾಗಿದೆ. ಟೆಸ್ಟಿಂಗ್ ವೇಳೆ ಕೃತಕ ಬಣ್ಣಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಇರೋದು ಪತ್ತೆಯಾಗಿತ್ತು.

ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ರೋಡಮೈನ್‌-ಬಿ ರಾಸಾಯನಿಕ ಅಂಶ ಪತ್ತೆಯಾಗಿದ್ರೆ, ಇತ್ತ ಗೋಬಿ ಮಂಚೂರಿಯಲ್ಲಿ‌ ಸನ್‌ಸೆಟ್‌ ಯೆಲ್ಲೊ‌ ಬಣ್ಣ ಮತ್ತು ಟಾಟ್ರ್ರಾಜಿನ್‌ ಪತ್ತೆಯಾಗಿದೆ. ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ‘ರೋಡಮೈನ್‌-ಬಿ’ ಹಾಗೂ ಗೋಬಿ ಮಂಚೂರಿಯಲ್ಲಿ’ಸನ್‌ಸೆಟ್‌ ಯೆಲ್ಲೊ’ ಬಣ್ಣ ಮತ್ತು ‘ಟಾಟ್ರ್ರಾಜಿನ್‌’ ರಾಸಾಯನಿಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಕಲರ್ ಬಳಕೆಯನ್ನು ನಿಷೇಧಿಸಿದೆ.

ಏನಿದು ರೋಡ್​ಮೈನ್ ಬಿ.. ಪರಿಣಾಮವೇನು?

ರೋಡ್​ಮೈನ್ ಬಿ ರಾಸಾಯನಿಕವನ್ನು, ಜವಳಿ, ಕಾಗದ, ಚರ್ಮದ ಉದ್ಯಮಗಳಲ್ಲಿ ಕೆಂಪು ಮತ್ತು ಗುಲಾಬಿ ಬಣ್ಣಕ್ಕಾಗಿ ಬಳಸಲಾಗುತ್ತೆ. ಈ ರಾಸಾಯನಿಕ ಆಹಾರದ ಮೂಲಕ ದೇಹ ಸೇರಿದ್ರೆ, ಕ್ಯಾನ್ಸರ್ ಖಾಯಿಲೆಗೆ ತುತ್ತಾಗುವ ಸಂಭವವಿದೆ. ಇದು ಕಾಟನ್ ಕ್ಯಾಂಡಿಯಲ್ಲಿ ಮಾತ್ರವಲ್ಲ, ಸಿಹಿ ತಿಂಡಿಗಳಾದ ಬಣ್ಣದ ಮಿಠಾಯಿಗಳಲ್ಲೂ ಇದು ಕಂಡು ಬರುತ್ತೆ. ಇದು ನಿರಂತರವಾಗಿ ದೇಹ ಸೇರಿದ್ರೆ ಮೆದುಳಿಗೂ ತುಂಬಾ ಎಫೆಕ್ಟ್ ಆಗುವ ಸಾಧ್ಯತೆಯಿದೆ.

You cannot copy content from Baravanige News

Scroll to Top