ಉಡುಪಿ : ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂನತ್ತ ಹೊಸ ಫಾರ್ಚೂನರ್ ಕಾರನ್ನು ಕೊಂಡೊಯ್ಯುತ್ತಿದ್ದಾಗ ಕಾರು ಚಾಲಕ ನಿಲ್ಲಿಸಿದ ಬಸ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಹೊಚ್ಚ ಹೊಸ ಫಾರ್ಚೂನರ್ ಕಾರು ನಜ್ಜುಗುಜ್ಜಾಗಿದೆ.
ಕಾರನ್ನು ಕುಂದಾಪುರ ಶೋರೂಂ ನಿಂದ ಮಂಗಳೂರು ಶೋರೂಂ ಗೆ ಚಾಲಕ ಕೊಂಡೊಯ್ಯುತ್ತಿದ್ದ. ಉಡುಪಿ ಸಮೀಪದ ನಿಟ್ಟೂರು ಬಳಿ ಹೋಗುತ್ತಿದ್ದಂತೆ ಕಾರು ಚಾಲಕನ ನಿರ್ಲಕ್ಷ್ಯದಿಂದ ರಸ್ತೆ ಬದಿ ಪ್ರಯಾಣಿಕರನ್ನು ಹತ್ತಿಸಲು ನಿಲ್ಲಿಸಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ.
ಘಟನೆ ಬಳಿಕ ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ವಿಷಯ ತಿಳಿದು ಕಾರು ಶೋರೂಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು.
ಸಂಚಾರ ಠಾಣೆಯ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಬಸ್ ಗೆ ಡಿಕ್ಕಿ ಹೊಡೆದ ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
20/08/2024
No Comments
Read More »
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
20/08/2024
No Comments
Read More »
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
19/08/2024
No Comments
Read More »