ಬೆಂಗಳೂರು : ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರುಣ್ ಚೌಗಲೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ಹೈಕೋರ್ಟ್‌ನ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.
ಅರುಣ್ ಚೌಗಲೆ 2023ರ ನವೆಂಬರ್ 12ರಂದು ಉಡುಪಿಯ ತೃಪ್ತಿ ಲೇಔಟ್‌ನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾ ಆಗಿತ್ತು.
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಕೇಸ್ – ಆರೋಪಿ ಅರುಣ್ ಚೌಗಲೆ ಜಾಮೀನು ಅರ್ಜಿ ವಜಾ
