ಉಡುಪಿ : ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಕೋಟ ಶ್ರೀನಿವಾಸ ಪೂಜಾರಿ ಸಭೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸಭೆಯಲ್ಲಿ ಒತ್ತಾಯಿಸಿದ ಅವರು, ಕೆಳಸೇತುವೆ ಕಾಮಗಾರಿ ಪ್ರದೇಶದಲ್ಲಿನ ಬಂಡೆ ತೆರವು ಕಾರ್ಯವನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಂತೆಕಟ್ಟೆಯಲ್ಲಿ ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಗುಂಡಿಗಳನ್ನು ಮುಚ್ಚುವ ಜತೆಗೆ ಸಾರ್ವಜನಿಕರ ಮನವಿಯಂತೆ ಅಗತ್ಯ ಸ್ಥಳಗಳಲ್ಲಿ ಸೂಚನಾ ಫಲಕ ಹಾಗೂ ಸಮರ್ಪಕ ಬೀದಿ ದೀಪಗಳ ಅಳವಡಿಕೆ ಹಾಗೂ ಸರ್ವೀಸ್ ರಸ್ತೆ ನಿರ್ಮಿಸುವ ಕುರಿತು ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಹೆದ್ದಾರಿ ಪ್ರಾಧಿಕಾರ ಹಾಗೂ ಗಣಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

You cannot copy content from Baravanige News

Scroll to Top