ಬಂಟ್ವಾಳ : ನಾಪತ್ತೆಯಾಗಿದ್ದ ಬಂಟ್ವಾಳ ಸಮೀಪ ಕೋಟಿಯ ದರ್ಶನ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಗಿರೀಶ್ ಮೃತದೇಹ ಪತ್ತೆಯಾಗಿದೆ.
ಕುಕ್ಕಿಪಾಡಿ ಗ್ರಾಮದ ರಿಕ್ಷಾಚಾಲಕ ಗಿರೀಶ್ ಎಂಬವರು ಕಾಣೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಗಿರೀಶ್ ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬಾಡಿಗೆ ಹೋಗಲು ಇದೆ ಎಂದು ಹೇಳಿ ಮನೆಯಿಂದ ತೆರಳಿದ್ದು, ಬುಧವಾರ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು ಪೊಳಲಿ ಗುರುಪುರ ಸೇತುವೆ ಮೇಲೆ ರಿಕ್ಷಾ ಒಂದು ಅಡ್ಡವಾಗಿ ನಿಂತಿದ್ದನ್ನು ಗಮನಿಸಿ ಪರಿಶೀಲನೆ ನಡೆಸಿದಾಗ ರಿಕ್ಷಾದಲ್ಲಿ ಯಾರೂ ಇಲ್ಲದೇ ಇರುವುದರಿಂದ ರಿಕ್ಷಾವನ್ನು ಪರಿಶೀಲಿಸಿದ ಪೊಲೀಸರು ಗಿರೀಶ ಅವರ ಮನೆಗೆ ಮಾಹಿತಿ ತಿಳಿಸಿದ್ದಾರೆ.
ಈಜುಗಾರರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ನದಿಯಲ್ಲಿ ಹುಡುಕಾಟ ನಡೆಸಿದಾಗ ಇಂದು ಮಧ್ಯಾಹ್ನ ವೇಳೆಗೆ ಮೃತದೇಹ ಪತ್ತೆಯಾಗಿದೆ.
ಗಿರೀಶ್ ಏಣ್ಮೂರು ಶ್ರೀ ನಾಗಬ್ರಹ್ಮ ದೈವಸ್ಥಾನದ ಬೈದರ್ಕಳ ಗರಡಿಯಲ್ಲಿ ಕೋಟಿಯ ದರ್ಶನ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಮೃತರು ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.