ಕುತ್ಯಾರು: ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದ ಶಾಸಕ ಲಾಲಾಜಿ ಆರ್. ಮೆಂಡನ್

ಕುತ್ಯಾರು : ಕಾಪು ತಾಲೂಕಿನ ಕುತ್ಯಾರು ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 3 ಕೋಟಿ 27 ಲಕ್ಷ ರೂಗಳ ವಿವಿಧ ಕಾಮಗಾರಿಗಳಲ್ಲಿ ಸುಮಾರು 19 ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ 3 ಕಾಮಗಾರಿಗಳಿಗೆ ಉದ್ಘಾಟನೆ ಶಾಸಕರಾದ ಲಾಲಾಜಿ ಆರ್ ಮೆಂಡನ್ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಬಿಜೆಪಿ ನೇತೃತ್ವದ ಕುತ್ಯಾರು ಗ್ರಾಮ ಪಂಚಾಯತ್ ಉತ್ತಮವಾಗಿ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿದ್ದು ಜನಪ್ರತಿನಿಧಿಗಳು ಜನರೊಂದಿಗೆ ನಿಕಟಸಂಪರ್ಕ ಹೊಂದಿದ್ದು ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈಗಾಗಲೇ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದ್ದು ಈಗಾಗಲೇ 5.33 ಕೋಟಿ ಅನುದಾನ ಹಾಗೂ ಈ ಭಾಗದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕುತ್ಯಾರು ಇದರ ನೂತನ ಕಟ್ಟಡ ನಿರ್ಮಾಣಕ್ಕೆ 18 ಕೋಟಿ ರೂಗಳನ್ನು ಒದಗಿಸಲಾಗಿದೆ ಶೀಘ್ರದಲ್ಲಿ ಲೋಕಾರ್ಪಣೆಗೊಳ್ಳಲಿದೆ ಹಾಗೂ ಪಂಚಾಯತ್ ವ್ಯಾಪ್ತಿಯಲ್ಲಿ ಇನ್ನು ಹೆಚ್ಚಿನ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.

You cannot copy content from Baravanige News

Scroll to Top