ವಿಚ್ಛೇದಿತ ಮುಸ್ಲಿಂ ಮಹಿಳೆಯರಿಗೆ ಜೀವನಾಂಶ ನೀಡುವ ಕುರಿತು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ವಿಚ್ಛೇದಿತ ಮುಸ್ಲಿಂ ಮಹಿಳೆ ಪತಿಯಿಂದ ಜೀವನಾಂಶ ಕೇಳುವ ಕುರಿತು ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.

ಸಿಆರ್ಪಿಸಿಯ ಸೆಕ್ಷನ್ 125ರ ಅಡಿಯಲ್ಲಿ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶವನ್ನು ಕೇಳಬಹುದು ಎಂದು ನ್ಯಾಯಾಲಯವು ಮಹತ್ವದ ನಿರ್ಧಾರದಲ್ಲಿ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ಮುಸ್ಲಿಂ ಮಹಿಳೆಯರ ಪರವಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರು ತಮ್ಮ ಗಂಡನಿಂದ ಜೀವನಾಂಶ ಪಡೆಯಲು ಸಿಆರ್‌ಪಿಸಿಯ ಸೆಕ್ಷನ್ 125 ರ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ತನ್ನ ಪತ್ನಿಗೆ ಜೀವನಾಂಶ ನೀಡುವಂತೆ ತೆಲಂಗಾಣ ಹೈಕೋರ್ಟ್ ನೀಡಿದ ಆದೇಶವನ್ನು ಮುಸ್ಲಿಂ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಬುಧವಾರ ಈ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ. ಮೊಹಮ್ಮದ್ ಅಬ್ದುಲ್ ಸಮದ್ ಎಂಬ ವ್ಯಕ್ತಿ ಅರ್ಜಿ ಸಲ್ಲಿಸಿದ್ದರು.

ಸಿಆರ್‌ಪಿಸಿಯ ಸೆಕ್ಷನ್ 125 ರ ಅಡಿಯಲ್ಲಿ ವಿಚ್ಛೇದಿತ ಪತ್ನಿಗೆ ಜೀವನಾಂಶ ಪಾವತಿಸುವ ನಿರ್ದೇಶನದ ವಿರುದ್ಧ ಮೊಹಮ್ಮದ್ ಅಬ್ದುಲ್ ಸಮದ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠ ತಿರಸ್ಕರಿಸಿತು.

ಮುಸ್ಲಿಂ ಮಹಿಳೆಯರ (ವಿಚ್ಛೇದನದ ಹಕ್ಕುಗಳ ರಕ್ಷಣೆ) ಕಾಯಿದೆ 1986 ಜಾತ್ಯತೀತ ಕಾನೂನನ್ನು ಅತಿಕ್ರಮಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿ ನಾಗರತ್ನ ಮತ್ತು ನ್ಯಾಯಮೂರ್ತಿ ಮಾಸಿಹ್ ಪ್ರತ್ಯೇಕ, ಆದರೆ ಸರ್ವಾನುಮತದ ತೀರ್ಪುಗಳನ್ನು ನೀಡಿದರು. 10,000 ಜೀವನಾಂಶ ನೀಡುವಂತೆ ಮೊಹಮ್ಮದ್ ಸಮದ್ ಗೆ ಹೈಕೋರ್ಟ್ ಸೂಚಿಸಿತ್ತು.

ಸೆಕ್ಷನ್ 125 ಎಲ್ಲಾ ಮಹಿಳೆಯರಿಗೆ ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್ ಜೀವನಾಂಶವನ್ನು ಕೋರುವ ಕಾನೂನು ಎಲ್ಲಾ ವಿವಾಹಿತ ಮಹಿಳೆಯರಿಗೆ ಅವರ ಧರ್ಮವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಪೀಠವು ಸ್ಪಷ್ಟಪಡಿಸಿದೆ. ಗೃಹಿಣಿಯಾಗಿರುವ ಹೆಂಡತಿ ಭಾವನಾತ್ಮಕವಾಗಿ ಮತ್ತು ಇತರ ರೀತಿಯಲ್ಲಿ ಅವಲಂಬಿತಳಾಗಿದ್ದಾಳೆ ಎಂಬ ಅಂಶದ ಬಗ್ಗೆ ಕೆಲವು ಗಂಡಂದಿರಿಗೆ ಪ್ರಜ್ಞೆ ಇರುವುದಿಲ್ಲ. ಭಾರತೀಯ ಪುರುಷನು ಗೃಹಿಣಿಯ ಪಾತ್ರವನ್ನು ಗುರುತಿಸಬೇಕಾದ ಸಮಯ ಬಂದಿದೆ ಎಂದಿದ್ದಾರೆ.

Scroll to Top