ಬೆಂಗಳೂರು : ‘ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದು ಹೇಳಿ ವೈರಲ್ ಆಗಿ ಬ್ಲ್ಯಾಕ್ಮೇಲ್ ಮಾಡಿ ಹಲವು ಕಡೆ ಹಣ ಸುಲಿಗೆ ಮಾಡಿರುವ ಆರೋಪದ ಬೆನ್ನಲ್ಲೇ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ಬಂಧನವಾಗಿದೆ. ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ.
ದಿವ್ಯ ವಸಂತ ಮತ್ತು ಗ್ಯಾಂಗ್ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿದ್ದರೆನ್ನಲಾಗಿದೆ, ಈ ಕೇಸ್ ನಲ್ಲಿ ತಮ್ಮನ ಬಂಧನ ನಂತರ ಪರಾರಿಯಾಗಿ ತಲೆಮರೆಸಿಕೊಂಡಿದ್ದ ದಿವ್ಯ ವಸಂತ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.
ಒಂದು ವಾರದಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ದಿವ್ಯ ತಮಿಳುನಾಡಿನಿಂದ ಕೇರಳದಲ್ಲಿ ತಲೆ ಮರೆಸಿಕೊಂಡಿದ್ದಳು. ಸದ್ಯ ಕೇರಳದಿಂದ ಬಂಧಿಸಿ ಕರೆತಂದಿರುವ ಜೀವನ್ ಭೀಮಾನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.