ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌; ಆ.1ರಿಂದ 7ನೇ ವೇತನ ಆಯೋಗದ ಶೀಫಾರಸ್ಸು ಜಾರಿ

ಬೆಂಗಳೂರು: ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಸರ್ಕಾರ ತೀರ್ಮಾನಿಸಿದೆ.

ಮಾ.16 ರಂದು ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಸಿಎಂ ಸಿದ್ದರಾಮಯ್ಯ ಸ್ವೀಕಾರ ಮಾಡಿದ್ದರು. ಬಳಿಕ ವೇತನ ಆಯೋಗದ ಶಿಫಾರಸು ಜಾರಿ ಬಗ್ಗೆ ಹಣಕಾಸು ಇಲಾಖೆಯಿಂದ ಹಣದ ಹೊಂದಾಣಿಕೆ ಕುರಿತು ಮಾಹಿತಿ ಕೇಳಲಾಗಿತ್ತು. ಇದೀಗ ಹಣಕಾಸು ಇಲಾಖೆಯ ವರದಿ ಬಳಿಕ ಸರ್ಕಾರ ತೀರ್ಮಾನ ಕೈಗೊಂಡಿದೆ.

ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನ ಸಂಪುಟ ಸಭೆಯಲ್ಲಿ ಸಿಎಂ ಪ್ರಕಟಿಸಿದ್ದಾರೆ. 27.5% ವೇತನ ಹೆಚ್ಚಳಕ್ಕೆ ಶಿಫಾರಸ್ಸು ವೇತನ ಆಯೋಗ ಶಿಫಾರಸು ಮಾಡಿತ್ತು. 27% ವೇತನ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರ (ಜು.16) ಇಂದು ಸದನದಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಈ ಬಗ್ಗೆ ಪ್ರಕಟ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

You cannot copy content from Baravanige News

Scroll to Top